newsics.com/ನ್ಯೂಸಿಕ್ಸ್
ನವದೆಹಲಿ: ಅಬುಧಾಬಿಗೆ ತೆರಳಲು ಸಿದ್ಧವಾಗುತ್ತಿದ್ದ ಇತಿಹಾದ್ ಏರ್‌ವೇಸ್ ವಿಮಾನವೊಂದರ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನದ ಹಾರಾಟವನ್ನು ಕೊನೆಕ್ಷಣದಲ್ಲಿ ರದ್ದುಗೊಳಿಸಲಾಗಿದೆ.
https://youtube.com/shorts/wvfyhGYwVVw?si=koK0hviI-H0dDOsr
ಮಂಗಳವಾರ ಈ ಘಟನೆ ನಡೆದಿದ್ದು, ವಿಮಾನವು ಟೇಕ್-ಆಫ್‌ಗೆ ಸಿದ್ಧವಾಗುತ್ತಿದ್ದಾಗ ಪೈಲಟ್‌ಗಳು ಎಡಭಾಗದ ರೆಕ್ಕೆಯಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ವಿಮಾನದಲ್ಲಿದ್ದ ಎಲ್ಲಾ 280 ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಗಿದ್ದು, ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ವಿಮಾನದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಈ ಕುರಿತು ತನಿಖೆ ಮುಂದುವರಿದಿದೆ.
https://www.newsics.com/2026/05/12/cooking-oil-prices-drop-sharply-after-pm-modis-call/