newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಮಹತ್ವದ ಬದಲಾವಣೆ ಮಾಡಲಾಗಿದ್ದು, ಡಿವೈ ಎಸ್ ಪಿ ಹಾಗೂ 87 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರ 12 ಡಿವೈ ಎಸ್ ಪಿ ಹಾಗೂ 87 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ದಿಢಿರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಮಂಜುನಾಥ್ ಆರ್. ಅವರನ್ನು ಹೆಚ್.ಎಸ್.ಆರ್ ಲೇಔಟ್ ಸಂಚಾರ ಠಾಣೆಗೆ, ಪ್ರವೀಣ್ ಕುಮಾರ್ ಟಿ.ಎಲ್. ಅವರನ್ನು ಜೀವನ್‌ಭೀಮಾನಗರ ಠಾಣೆಗೆ ಹಾಗೂ ಗಿರೀಶ್ ಬಿ.ಸಿ. ಅವರನ್ನು ಕೆ.ಜಿ ಹಳ್ಳಿ ಪೊಲೀಸ್ ಠಾಣೆಗೆ ನಿಯುಕ್ತಿಗೊಳಿಸಲಾಗಿದೆ.
ಶ್ರೀನಿವಾಸ ಬಿ.ಎಂ., ನಿಂಗನಗೌಡ ಎ ಪಾಟೀಲ್, ತಿಪ್ಪೇಸ್ವಾಮಿ ಬಿ.ಎಂ. ಸೇರಿದಂತೆ ಹಲವು ಅಧಿಕಾರಿಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.