newsics.com/ನ್ಯೂಸಿಕ್ಸ್
ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರು ಮೇ 13, 2026ರ (ಇಂದು) ಬುಧವಾರದಂದು ಹೃದಯಾಘಾತದಿಂದ ನಿಧನರಾಗಿದ್ದು, ರಾಮನಗರದ ಅವರ ಫಾರ್ಮ್‌ಹೌಸ್‌ನಲ್ಲಿ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ.
ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ಯಶಸ್ವಿ ನಿರ್ಮಾಪಕ ದಿಲೀಪ್ ರಾಜ್ (47) ಅವರ ಪಾರ್ಥಿವ ಶರೀರವು ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನಗಳೊಂದಿಗೆ ಮಣ್ಣಿನಲ್ಲಿ ಲೀನವಾಯಿತು. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್ ರಾಜ್ ಅಣ್ಣನ ಮಗನಿಂದ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.
ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದರು. ಅಲ್ಲದೆ, ‘ಪಾರು’ ಮತ್ತು ‘ನಾ ನಿನ್ನ ಬಿಡಲಾರೆ’ ಮುಂತಾದ ಧಾರಾವಾಹಿಗಳನ್ನು ತಮ್ಮದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದರು. ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್, ನಟನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗ ಮತ್ತು ಕಿರುತೆರೆ ವಲಯದಲ್ಲಿ ಕಂಬನಿ ಮಿಡಿಯುತ್ತಿದ್ದಾರೆ.
https://www.newsics.com/2026/05/13/vidya-married-dilip-raj-despite-being-told-not-to/