newsics.com/ನ್ಯೂಸಿಕ್ಸ್
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಸುವೇಂದು ಅಧಿಕಾರಿ ಅವರು ಹನ್ನೆರಡಕ್ಕೂ ಹೆಚ್ಚು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ.
ರಾಜ್ಯ ಸಚಿವಾಲಯ ನಬನ್ನಾದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸುವೇಂದು, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದ್ದಾರೆ.ಮಂದಿರ ಅಥವಾ ಮಸೀದಿ ಯಾವುದೇ ಇರಲಿ, ಧ್ವನಿವರ್ಧಕಗಳ ಶಬ್ದವು ಆಯಾ ಧಾರ್ಮಿಕ ಸ್ಥಳಗಳ ಆವರಣದಿಂದ ಹೊರಗೆ ಹೋಗಬಾರದು. ವಿಶೇಷ ಸಂದರ್ಭಗಳಲ್ಲಿ ರಸ್ತೆಗಳನ್ನು ಬಂದ್ ಮಾಡಿ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಲಾಗಿದೆ.
ಚುನಾವಣೆಯ ನಂತರ ನಡೆದ 1300ಕ್ಕೂ ಹೆಚ್ಚು ಹಿಂಸಾಚಾರದ ಪ್ರಕರಣಗಳನ್ನು ಮರುತನಿಖೆಗೊಳಪಡಿಸಲು ಆದೇಶಿಸಿದ್ದಾರೆ.ಸರ್ಕಾರಿ ಉದ್ಯೋಗಗಳಿಗಾಗಿ ಅಭ್ಯರ್ಥಿಗಳ ವಯೋಮಿತಿಯನ್ನು 40 ರಿಂದ 45 ವರ್ಷಕ್ಕೆ ಹೆಚ್ಚಿಸಲಾಗಿದೆ.ಜಾನುವಾರುಗಳ ಕಳ್ಳಸಾಗಣೆ ತಡೆಯುವುದು ಮತ್ತು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಜೂನ್ 1 ರಿಂದ ಮಹಿಳೆಯರಿಗೆ ಖಾಸಗಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಘೋಷಿಸಿದ್ದಾರೆ.ಕಲ್ಲಿದ್ದಲು, ಮರಳು ಮತ್ತು ಕಲ್ಲು ಗಣಿಗಾರಿಕೆಯ ಅಕ್ರಮ ದಂಧೆಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಲು ಸೂಚಿಸಲಾಗಿದೆ.