newsics.com/ನ್ಯೂಸಿಕ್ಸ್
ಲಖನೌ: ಉತ್ತರ ಪ್ರದೇಶದಲ್ಲಿ 26 ಗಂಟೆಗಳ ಅವಧಿಯಲ್ಲಿ ಮೂವರನ್ನು ಗುಂಡಿಕ್ಕಿ ಕೊಂದಿದ್ದ ನಿವೃತ್ತ ಯೋಧನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ.
ಆರೋಪಿಯನ್ನು 45 ವರ್ಷದ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ಆರೋಪಿಯನ್ನು ಅಪರಾಧ ದೃಶ್ಯದ ಮರುಸೃಷ್ಟಿಗಾಗಿ ಕರೆದೊಯ್ಯಲಾಗಿತ್ತು.
ಈ ವೇಳೆ ಆತ ಪೊಲೀಸರ ಬಳಿಯಿದ್ದ ಪಿಸ್ತೂಲ್ ಕಿತ್ತುಕೊಂಡು ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಆತ ಮೃತಪಟ್ಟಿದ್ದಾನೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಅಮೃತಸರ ಮೂಲದ ಗುರುಪ್ರೀತ್ ಸಿಂಗ್ ಅವರು ಆರು ವರ್ಷಗಳ ಹಿಂದೆ ಸೇನೆಯಿಂದ ನಿವೃತ್ತರಾಗಿದ್ದರು.
https://www.newsics.com/2026/05/13/priest-gives-coins-to-devotees-while-smoking-a-cigarette/