newsics.com/ನ್ಯೂಸಿಕ್ಸ್
ನವದೆಹಲಿ: ಮೇ 12ರಂದು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ NTA ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ, ಭಾರತೀಯ ವೈದ್ಯಕೀಯ ಸಂಘಟನೆಗಳ ಒಕ್ಕೂಟ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವ್ಯವಸ್ಥೆಯಲ್ಲಿ ವ್ಯವಸ್ಥಿತ ವೈಫಲ್ಯ ಕಂಡಬಂದಿದ್ದು, ಈ ಸಂಸ್ಥೆಯನ್ನು ವಿಸರ್ಜಿಸಿ ಹೆಚ್ಚು ಬಲಿಷ್ಠವಾದ ಮಂಡಳಿಯನ್ನು ರಚಿಸಬೇಕು ಎಂದು FAIMA ಆಗ್ರಹಿಸಿದೆ.
NTA ಸಂಸ್ಥೆಯನ್ನು ಸಂಪೂರ್ಣವಾಗಿ ಪುನರ್ರಚಿಸಬೇಕು ಅಥವಾ ಅದರ ಬದಲಿಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸ್ವತಂತ್ರ ಮತ್ತು ಬಲಿಷ್ಠ ಸಂಸ್ಥೆಯನ್ನು ನೇಮಿಸಬೇಕು.ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಸೈಬರ್ ಭದ್ರತಾ ತಜ್ಞರು ಮತ್ತು ಫೋರೆನ್ಸಿಕ್ ವಿಜ್ಞಾನಿಗಳನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯ ನೇತೃತ್ವದಲ್ಲಿ NEET UG 2026 ಮರುಪರೀಕ್ಷೆಯನ್ನು ನಡೆಸಬೇಕು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದಿರುವ ಬಂಧನಗಳು ಮತ್ತು ತನಿಖೆಯ ಪ್ರಗತಿಯ ಬಗ್ಗೆ ನಾಲ್ಕು ವಾರಗಳೊಳಗೆ ಸ್ಥಿತಿ ವರದಿ ಸಲ್ಲಿಸಲು ಸಿಬಿಐಗೆ ಸೂಚಿಸಬೇಕು.