newsics.com/ನ್ಯೂಸಿಕ್ಸ್
ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ
ಇದರಿಂದ ನೊಂದ ರಾಮ್ ಕುಮಾರ್, ಪೋಷಕರು ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.