Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > KGF actress Mouni Roy ಕೆಜಿಎಫ್ ನಟಿ ಮೌನಿ ರಾಯ್- ಉದ್ಯಮಿ ಸೂರಜ್ ನಂಬಿಯಾರ್ ನಡುವೆ ಬಿರುಕು! ವಿಚ್ಛೇದನ ಘೋಷಿಸಿದ ಜೋಡಿ
ದೇಶಪ್ರಮುಖಮನರಂಜನೆ

KGF actress Mouni Roy ಕೆಜಿಎಫ್ ನಟಿ ಮೌನಿ ರಾಯ್- ಉದ್ಯಮಿ ಸೂರಜ್ ನಂಬಿಯಾರ್ ನಡುವೆ ಬಿರುಕು! ವಿಚ್ಛೇದನ ಘೋಷಿಸಿದ ಜೋಡಿ

Share
2 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್‌ನ ಜನಪ್ರಿಯ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಹಾಗಾಗಿ ತಮ್ಮ ನಾಲ್ಕು ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ವಿಚ್ಛೇದನದ ಬಗ್ಗೆ ಗುರುವಾರ (ಮೇ 14) ಅಧಿಕೃತವಾಗಿ ಘೋಷಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ‌ ಜಂಟಿ ಹೇಳಿಕೆ ನೀಡಿರುವ ದಂಪತಿ, ‘ನಾವು ಪರಸ್ಪರ ಒಪ್ಪಿಗೆಯೊಂದಿಗೆ ಬೇರೆಯಾಗುತ್ತಿದ್ದೇವೆ’ ಎಂದು ಖಚಿತಪಡಿಸಿದ್ದಾರೆ. ಕೆಲವು ದಿನಗಳಿಂದ ಜನರಿಗೆ ಮೂಡಿದ್ದ ಅನುಮಾನ ಕಡೆಗೂ ನಿಜವಾಗಿದೆ.

ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಬ್ಬಿರುವ ವದಂತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ‘ನಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾಧ್ಯಮಗಳ ಕೆಲವು ವಲಯಗಳಲ್ಲಿ ಅನಗತ್ಯ ಹಸ್ತಕ್ಷೇಪ ನಡೆಯುತ್ತಿರುವುದು ವಿಷಾದನೀಯ. ನಾವು ಪ್ರತ್ಯೇಕವಾಗಲು ನಿರ್ಧರಿಸಿದ್ದೇವೆ ಮತ್ತು ಈ ವಿಷಯವನ್ನು ಖಾಸಗಿಯಾಗಿ ಹಾಗೂ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತಿದ್ದೇವೆ. ನಮ್ಮ ಬಗ್ಗೆ ಹರಡುತ್ತಿರುವ ಸುಳ್ಳು ಸುದ್ದಿಗಳು ವಾಸ್ತವಕ್ಕೆ ದೂರವಾಗಿವೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ವೈಯಕ್ತಿಕ ಆದ್ಯತೆಗಳ ಬದಲಾವಣೆಯಿಂದಾಗಿ ನಾವು ಪರಸ್ಪರ ಗೌರವದಿಂದಲೇ ಪ್ರತ್ಯೇಕ ಹಾದಿಯಲ್ಲಿ ಸಾಗಲು ನಿರ್ಧರಿಸಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಸ್ನೇಹವನ್ನು ನಾವು ಗೌರವಿಸುತ್ತೇವೆ. ನಮ್ಮ ಈ ನಿರ್ಧಾರ ಮತ್ತು ಗೌಪ್ಯತೆಯನ್ನು ಸಾರ್ವಜನಿಕರು ಗೌರವಿಸುತ್ತಾರೆ ಎಂದು ನಂಬಿದ್ದೇವೆ’ ಎಂದು ಮನವಿ ಮಾಡಿದ್ದಾರೆ.

ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಮೊದಲ ಬಾರಿಗೆ 2018ರಲ್ಲಿ ದುಬೈನಲ್ಲಿ ನಡೆದ ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಭೇಟಿಯಾಗಿದ್ದರು. ವಿಶೇಷವೆಂದರೆ, ಸೂರಜ್ ಅವರಿಗೆ ಮೌನಿ ರಾಯ್ ಭಾರತದ ಖ್ಯಾತ ನಟಿ ಎಂಬ ವಿಷಯ ಮೊದಲ ಭೇಟಿಯಲ್ಲಿ ತಿಳಿದಿರಲಿಲ್ಲವಂತೆ. ಸ್ನೇಹವಾಗಿ ಆರಂಭವಾದ ಇವರ ಸಂಬಂಧ ಬಳಿಕ ಪ್ರೇಮಕ್ಕೆ ತಿರುಗಿತ್ತು. ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಇವರ ಸಂಬಂಧ ಮತ್ತಷ್ಟು ಗಟ್ಟಿಯಾಗಿತ್ತು.

2022ರ ಜನವರಿ 27ರಂದು ಗೋವಾದಲ್ಲಿ ಈ ಜೋಡಿ ಅದ್ದೂರಿಯಾಗಿ ವಿವಾಹವಾಗಿದ್ದರು. ಬೆಂಗಾಲಿ ಮತ್ತು ಮಲಯಾಳಿ ಸಂಪ್ರದಾಯದಂತೆ ನಡೆದ ಈ ಮದುವೆಯಲ್ಲಿ ಚಿತ್ರರಂಗದ ಗಣ್ಯರು ಮತ್ತು ಆಪ್ತರು ಭಾಗವಹಿಸಿದ್ದರು. ಆದರೆ, ಮದುವೆಯಾದ ಕೇವಲ ನಾಲ್ಕು ವರ್ಷಕ್ಕೆ ಈ ಸುಂದರ ಜೋಡಿ ಬೇರೆಯಾಗುತ್ತಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

https://www.instagram.com/p/DYUeWWTNzVz/?igsh=eHp5N3F6Nm10Njds

https://www.instagram.com/p/DYUeWWTNzVz/?igsh=eHp5N3F6Nm10Njds

 

Sexual violence ಮಹಿಳೆಯರ ಶವಗಳನ್ನೂ ಬಿಡದ ಕಾಮುಕರು…! ಸಶಸ್ತ್ರ ಗುಂಪುಗಳ‌ ಲೈಂಗಿಕ ಹಿಂಸಾಚಾರ ವರದಿ ಬಿಡುಗಡೆ

TAGGED:Actress Mouni Roy and businessman Suraj Nambiar have a rift! The couple has announced their divorce.
Share This Article
Facebook Twitter Copy Link Print
Previous Article NEET-UG 2026 paper leak ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ
Next Article ಪರೀಕ್ಷೆ ರದ್ದು ಹಿನ್ನೆಲೆ: ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?