newsics.com/ನ್ಯೂಸಿಕ್ಸ್
ಕೊಪ್ಪಳ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದ ಪರಿಣಾಮ 7 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.
ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ.
ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ.
ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ನಡೆದಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಹೊಸಪೇಟೆ ಮತ್ತು ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ
ಪ್ರಧಾನಿ ಮೋದಿ ವಿಮಾನಕ್ಕೆ UAEನಿಂದ F16 ಫೈಟರ್ ಜೆಟ್‌ಗಳ ಬೆಂಗಾವಲು ಗೌರವ, ವಿಡಿಯೋ ನೋಡಿ