Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Highcourt verdict ಭೋಜಶಾಲಾ ಸರಸ್ವತಿ ಮಂದಿರಕ್ಕೆ ಸೇರಿದ್ದು, ಮಸೀದಿಗೆ ಪರ್ಯಾಯ ಭೂಮಿ: ಎಂಪಿ ಹೈಕೋರ್ಟ್ ತೀರ್ಪು
ದೇಶಪ್ರಮುಖ

Highcourt verdict ಭೋಜಶಾಲಾ ಸರಸ್ವತಿ ಮಂದಿರಕ್ಕೆ ಸೇರಿದ್ದು, ಮಸೀದಿಗೆ ಪರ್ಯಾಯ ಭೂಮಿ: ಎಂಪಿ ಹೈಕೋರ್ಟ್ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ಭೋಪಾಲ್: ಧಾರ್ ಜಿಲ್ಲೆಯಲ್ಲಿರುವ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿ ದೇವಸ್ಥಾನಕ್ಕೆ ಸೇರಿದ್ದು ಎಂದು ಮಧ್ಯಪ್ರದೇಶ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರ ಪೀಠವು, ಮುಸ್ಲಿಮರು ಮತ್ತು ಹಿಂದೂಗಳು ಆ ಸ್ಥಳದಲ್ಲಿ ಬೇರೆ ಬೇರೆ ದಿನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI)ಯ 2003 ರ ಆದೇಶವನ್ನು ರದ್ದುಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ವಿವಾದಿತ ರಚನೆಯು ಸಂರಕ್ಷಿತ ಸ್ಮಾರಕವಾಗಿದೆ. ಆದರೆ ಅದರ ಧಾರ್ಮಿಕ ಲಕ್ಷಣವು ದೇವಾಲಯದ್ದಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಮಸೀದಿಗೆ ಪರ್ಯಾಯ ಭೂಮಿ ಹಂಚಿಕೆಗಾಗಿ ಮುಸ್ಲಿಂ ಸಮುದಾಯದ ಸದಸ್ಯರು ಅರ್ಜಿ ಸಲ್ಲಿಸಿದರೆ ರಾಜ್ಯ ಸರ್ಕಾರವನ್ನು ಅದನ್ನು ಕಾನೂನಿನ ಪ್ರಕಾರ ಪರಿಶೀಲಿಸಬಹುದು ಎಂದು ಹೈಕೋರ್ಟ್ ಹೇಳಿದೆ.

ವಿವಾದಿತ ಪ್ರದೇಶದ ಭೋಜಶಾಲಾ ಸಂಕೀರ್ಣ ಮತ್ತು ಕಮಲ್ ಮೌಲಾ ಮಸೀದಿಯ ಧಾರ್ಮಿಕ ಸ್ವರೂಪವು ಸರಸ್ವತಿ ದೇವಿಯ ದೇವಾಲಯವನ್ನು ಹೊಂದಿರುವ ಭೋಜಶಾಲಾ ಎಂದು ಪರಿಗಣಿಸಲಾಗಿದೆ” ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಐತಿಹಾಸಿಕ ದಾಖಲೆಗಳು, ಪುರಾತತ್ತ್ವ ಶಾಸ್ತ್ರದ ವಸ್ತುಗಳು ಮತ್ತು ASI ಸಂಶೋಧನೆಗಳನ್ನು ಆಧರಿಸಿ, ನ್ಯಾಯಾಲಯವು ಈ ಸ್ಥಳ ಐತಿಹಾಸಿಕವಾಗಿ ಸರಸ್ವತಿ ದೇವಿಗೆ ದೇವಾಲಯಕ್ಕೆ ಸೇರಿದ್ದು, ಸಂಸ್ಕೃತ ಕಲಿಕೆಯ ಕೇಂದ್ರವಾಗಿತ್ತು ಎಂದು ತೀರ್ಮಾನಿಸಿದೆ.

ವಿವಾದ ಸ್ಥಳದಲ್ಲಿ ಹಿಂದೂ ಪೂಜಾ ಹಕ್ಕುಗಳನ್ನು ಪುನಃಸ್ಥಾಪಿಸಲು ಮತ್ತು ಸಂಕೀರ್ಣದೊಳಗೆ ನಮಾಜ್‌ಗೆ ಅವಕಾಶ ನೀಡುವ ASIಯ 2003ರ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿತ್ತು.

ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳು, ASI ವರದಿಗಳು ಹಾಗೂ ಸುಪ್ರೀಂ ಕೋರ್ಟ್‌ನ ಅಯೋಧ್ಯಾ ತೀರ್ಪನ್ನು ಪೂರ್ವನಿದರ್ಶನವಾಗಿ ಪರಿಗಣಿಸಲಾಗಿದೆ ಎಂದು ಕೋರ್ಟ್ ಹೇಳಿದೆ.

tractor falls off Tungabhadra bridge ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ

Share This Article
Facebook Twitter Copy Link Print
Previous Article Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ
Next Article Money showered on the singer ಭಕ್ತಿ ಗಾಯನಕ್ಕೆ ಮಾರುಹೋದ ಭಕ್ತರು: ಗಾಯಕನ ಮೇಲೆ ಹಣದ ಸುರಿಮಳೆ! ವಿಡಿಯೋ‌ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?