Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೂರು ಕೋಟಿ ರೂಪಾಯಿ ಮೌಲ್ಯದ ಆಸ್ತಿಗಾಗಿ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದ ಪತಿ
ದೇಶಪ್ರಮುಖ

ಮೂರು ಕೋಟಿ ರೂಪಾಯಿ ಮೌಲ್ಯದ ಆಸ್ತಿಗಾಗಿ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದ ಪತಿ

Share
1 Min Read
SHARE

newsics.com/ನ್ಯೂಸಿಕ್ಸ್

ಮೂರು ಕೋಟಿ ರೂಪಾಯಿ ಮೌಲ್ಯದ ಆಸ್ತಿಗಾಗಿ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಅರೆಬರೆ ಸುಟ್ಟು ಹಾಕಿದ  ಘಟನೆ ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೋನಿಕಾ ನಾಗರ್ (22) ಎಂದು ಗುರುತಿಸಲಾಗಿದೆ.

https://youtube.com/shorts/vd_Fn8drod4?si=CvPPZAJu5QmGONhu

ನ್ಯಾಯಾಲಯದಲ್ಲಿ ವಿವಾಹವಾದ ಕೇವಲ ಮೂರೇ ತಿಂಗಳಲ್ಲಿ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಸುಡಲು ಯತ್ನಿಸಿರುವ ಘಟನೆ ದಾದ್ರಿಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿ ಅನುಜ್ ಚೌಹಾಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರನ್ನು ಮೋನಿಕಾ ನಾಗರ್ (22) ಎಂದು ಗುರುತಿಸಲಾಗಿದೆ.ಆರೋಪಿ ಅನುಜ್ ಚೌಹಾಣ್ (25) ಈ ಕೃತ್ಯ ಎಸಗಿದ್ದಾನೆ.ಈ ಜೋಡಿ ಕಳೆದ ಫೆಬ್ರವರಿ ತಿಂಗಳಷ್ಟೇ ಪ್ರೇಮ ವಿವಾಹವಾಗಿತ್ತು.

ಮೇ 7 ರಂದು ದಾದ್ರಿಯ ನಿರ್ಜನ ಪ್ರದೇಶವೊಂದರಲ್ಲಿ ಮೋನಿಕಾ ಅವರ ಅರೆಬರೆ ಸುಟ್ಟ ಸ್ಥಿತಿಯ ಶವ ಪತ್ತೆಯಾಗಿತ್ತು. ಪೊಲೀಸ್ ತನಿಖೆಯ ಪ್ರಕಾರ, ಅನುಜ್ ತನ್ನ ಪೋಷಕರು ಮತ್ತು ನೆರೆಹೊರೆಯವರ ಸಹಾಯದೊಂದಿಗೆ ಎಸ್‌ಯುವಿ (SUV) ಕಾರಿನಲ್ಲಿ ಶವವನ್ನು ಸಾಗಿಸಿ, ಸೆಗಣಿ ಬೆರಣಿಗಳ ಅಡಿಯಲ್ಲಿಟ್ಟು ಬೆಂಕಿ ಹಚ್ಚಿದ್ದ ಎನ್ನಲಾಗಿದೆ.

ಮೋನಿಕಾ ಅವರ ಕುಟುಂಬಸ್ಥರು ಆಘಾತಕಾರಿ ಆರೋಪಗಳನ್ನು ಮಾಡಿದ್ದಾರೆ:ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಮೋನಿಕಾಗೆ ಆಕೆಯ ಪತಿ ಮತ್ತು ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು.ಕೊಲೆಯಾದ ದಿನ ಮೋನಿಕಾ ತನ್ನ ತಾಯಿಗೆ ಕರೆ ಮಾಡಿ, ತನ್ನ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಗೋಳಾಡಿದ್ದರು.ಅದೇ ಸಂಜೆ ಕಪ್ಪು ಬಣ್ಣದ ಫಾರ್ಚೂನರ್ ಕಾರಿನಲ್ಲಿ ಶವವನ್ನು ಸಾಗಿಸುವುದನ್ನು ಸಂಬಂಧಿಕರು ಗಮನಿಸಿದ್ದರು.

ಪೊಲೀಸರು ಆರೋಪಿ ಅನುಜ್‌ನನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಹಂತಕ ಅನುಜ್ ಸೇರಿದಂತೆ ಅವನ ಕುಟುಂಬದ ಏಳು ಜನರ ಮೇಲೆ ಕೊಲೆ (BNS ಸೆಕ್ಷನ್ 103) ಮತ್ತು ಸಾಕ್ಷ್ಯ ನಾಶಪಡಿಸಿದ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/05/15/good-news-for-alcohol-lovers-huge-reduction-in-beer-whiskey-prices/

TAGGED:Husband sets wife on fire to death over property worth Rs 3 crore
Share This Article
Facebook Twitter Copy Link Print
Previous Article ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬಿಯರ್, ವಿಸ್ಕಿ ದರದಲ್ಲಿ ಭಾರಿ ಇಳಿಕೆ
Next Article Bomb Threat ಹೈದರಾಬಾದ್ ನ ಶಂಷಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?