newsics.com/ನ್ಯೂಸಿಕ್ಸ್
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ.
https://youtube.com/shorts/KY0wlwc-Du0?si=-28u12qk1-aiTIHP
ದೆಹಲಿಯಲ್ಲಿ ಪೆಟ್ರೋಲ್ ದರ 100 ರೂಪಾಯಿಗಳ ಗಡಿಯಲ್ಲಿದ್ದರೆ, ಡೀಸೆಲ್ ಬೆಲೆಯೂ ಗಣನೀಯವಾಗಿ ಏರಿಕೆಯಾಗಿದೆ.
ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿರುವುದು ಈ ಬದಲಾವಣೆಗೆ ಪ್ರಮುಖ ಕಾರಣ ಎನ್ನಲಾಗಿದೆ.
ಸಾರಿಗೆ ವೆಚ್ಚ ಹೆಚ್ಚಾಗುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ. ತೈಲ ಕಂಪನಿಗಳು ಅನುಭವಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಈ ಕ್ರಮ ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.