newsics.com/ನ್ಯೂಸಿಕ್ಸ್
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
https://youtube.com/shorts/qM17NYCF6QQ?si=P9kdXfY-X5l0cveO
ಸದ್ಯ ಈ ಬಸ್ನಲ್ಲಿ ಸುಮಾರು 36 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ ಸದ್ಯ ಭಾರೀ ಅನಾಹುತ ತಪ್ಪಿಸಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಈ ಘಟನೆಯಲ್ಲಿ 36 ಮಂದಿ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.
ರಾತ್ರಿ ವೇಳೆ ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಭರತ್ ಕಂಪನಿಗೆ ಸೇರಿದ ಖಾಸಗಿ ಸ್ಲೀಪರ್ ಕೋಚ್ ಬಸ್, ಶಾಂತಿಗ್ರಾಮದ ಬಳಿ ಬಂದಾಗ ಹಿಂಬದಿಯ ಟೈರ್ ಭಾಗದಲ್ಲಿ ಅಚಾನಕ್ ಬೆಂಕಿ ಹೊತ್ತಿಕೊಂಡಿತ್ತು. ಚಾಲಕನ ಸಮಯಪ್ರಜ್ಞೆ ಮತ್ತು ಎಚ್ಚರಿಕೆಯಿಂದ ಈ ಭಾರೀ ದುರಂತ ತಪ್ಪಿದಂತಾಗಿದೆ.