Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?
ಪ್ರಮುಖಮನರಂಜನೆ

ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?

Share
2 Min Read
SHARE

 

ತಮಿಳುನಾಡು ಚುನಾವಣೆಯಲ್ಲಿ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ಟಿವಿಕೆ ಮೊದಲ ಚುನಾವಣೆಯಲ್ಲಿಯೇ 108 ಸ್ಥಾನ ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದ್ದಂತೆ, ಪಕ್ಕದ ಆಂಧ್ರ ಪ್ರದೇಶದಲ್ಲಿ ಸೂಪರ್ ಸ್ಟಾರ್ ಮತ್ತು ಡಿಸಿಎಂ ಪವನ್ ಕಲ್ಯಾಣ್  ಟ್ರೋಲ್​ಗೆ ಗುರಿಯಾಗಿದ್ದರು.

 

ಈ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಪವನ್‌ ಕಲ್ಯಾಣ್‌,ನಾನು ದಳಪತಿ ವಿಜಯ್‌ ಮಾದರಿಯಲ್ಲೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಬೇಕು ಎಂದು ಅಭಿಮಾನಿಗಳು ಇಚ್ಚಿಸಿದ್ದಾರೆ ಎಂದು ಹೇಳಿದ್ದಾರೆ

ಹೌದು, ವಿಜಯ್‌ ಅವರ ಹೆಸರನ್ನು ಉಲ್ಲೇಖಿಸದೆ, ತಮಿಳುನಾಡು ಚುನಾವಣೆಗಳು ಮತ್ತು ಅವರು ಮುಖ್ಯಮಂತ್ರಿಯಾದಾಗಿನಿಂದ ಜನರು ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದರು.
ಮಂಗಳಗಿರಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪವನ್ ಕಲ್ಯಾಣ್, ವಿಜಯ್, ತಮಿಳುನಾಡಿನ ಸಿಎಂ ಆದ ಬಗ್ಗೆ ಹಾಗೂ ಅದಾದ ಬಳಿಕ ತಮ್ಮ ಮೇಲೆ ಬರುತ್ತಿರುವ ಒತ್ತಡದ ಬಗ್ಗೆಯೂ ಮಾತನಾಡಿದ್ದಾರೆ. ಪವನ್ ಕಲ್ಯಾಣ್ ಅವರ ಸಹೋದರ ಚಿರಂಜೀವಿ ಅವರು ದಳಪತಿ ವಿಜಯ್ ಅವರೊಟ್ಟಿಗೆ ಇತ್ತೀಚೆಗಷ್ಟೆ ದೂರವಾಣಿ ಮೂಲಕ ಮಾತನಾಡಿದ್ದರು. ಅದರ ಬೆನ್ನಲ್ಲೆ ಇದೀಗ ಪವನ್ ಕಲ್ಯಾಣ್ ಅವರು ವಿಜಯ್ ಬಗ್ಗೆ ಮಾತನಾಡಿದ್ದಾರೆ.

ಮಂಗಳಗಿರಿಯಲ್ಲಿರುವ ಜನಸೇನಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪವನ್, ವಿಜಯ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, “ತಮಿಳುನಾಡು ಚುನಾವಣೆ ನಡೆದು ಅವರು (ವಿಜಯ್) ಮುಖ್ಯಮಂತ್ರಿಯಾದಾಗಿನಿಂದ ಜನರು ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ’ ಎಂದರು. ಮುಂದುವರಿದು, ‘ನಮ್ಮ ನೆರೆಯ ರಾಜ್ಯದಲ್ಲಿ ನಟರೊಬ್ಬರು ಪಕ್ಷ ಸ್ಥಾಪಿಸಿ ಮುಖ್ಯಮಂತ್ರಿಯಾಗಿದ್ದಾರೆ. ನಾನು ಕೂಡ ಆಂಧ್ರಪ್ರದೇಶದಲ್ಲಿ ಇದೇ ರೀತಿ ಮಾಡಬೇಕಿತ್ತು ಎಂದು ಅನೇಕರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ’ ಎಂದು ಹೇಳಿದರು.
ತೆಲುಗಿನ ಗಾದೆಯೊಂದನ್ನು ಹೇಳಿದ ಪವನ್ ಕಲ್ಯಾಣ್ ‘ಊರವರ ಮದುವೆಗೆ, ಇನ್ನಿಲ್ಲದ ಸಡಗರ’ ಎನ್ನುತ್ತಾರಲ್ಲ ಹಾಗೆ. ಇದು ಸಣ್ಣ ಮಕ್ಕಳು ತಮ್ಮ ಕುಟುಂಬದ ಮದುವೆ ಅಲ್ಲದಿದ್ದರೂ ಸುತ್ತಲೂ ಓಡಾಡುವ ಸಡಗರದಂತಿದೆ. ಆಂಧ್ರಪ್ರದೇಶದ ಪರಿಸ್ಥಿತಿಯೇ ಬೇರೆ. ಅವರು ಹೇಳಿದಂತೆ ನಾನು 2019 ರ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಆಗ ಅವರು (ಜನ) ಏನು ಮಾಡಿದರು? ಮಂತ್ರಿಗಳು ಕೂಡ ನನ್ನ ಜೊತೆ ನಿಲ್ಲಲಿಲ್ಲ. ಆದ್ದರಿಂದ ದಯವಿಟ್ಟು ಹೋಲಿಕೆ ಮಾಡಬೇಡಿ’ ಎಂದು ವಿನಂತಿಸಿದರು.

ಪವನ್ ಕಲ್ಯಾಣ್ ಅವರು 2014 ರಲ್ಲಿ ‘ಜನಸೇನಾ’ ಪಕ್ಷವನ್ನು ಸ್ಥಾಪಿಸಿದರು. ಬಳಿಕ 2019 ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರು. ಸ್ವತಃ ಪವನ್ ಕಲ್ಯಾಣ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಆದರೆ ಎರಡೂ ಕಡೆ ಸೋತರು. ಅವರ ಪಕ್ಷಕ್ಕೆ ತೀವ್ರ ನಿರಾಸೆ ಆಗಿತ್ತು. ಆದರೆ 6% ಮತಗಳನ್ನು ಅವರ ಪಕ್ಷ ತೆಗೆದುಕೊಂಡಿತು. ಆದರೆ 2024 ರಲ್ಲಿ ಟಿಡಿಪಿ ಮತ್ತು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿ ಖುದ್ದು ಪೀಠಾಪುರಂ ಕ್ಷೇತ್ರದಿಂದ ಗೆದ್ದಿದ್ದು ಮಾತ್ರವಲ್ಲದೆ ಅವರ ಪಕ್ಷದ ಇನ್ನೂ ಹಲವು ಅಭ್ಯರ್ಥಿಗಳು ಗೆದ್ದು ಶಾಸಕರಾದ್ರು.

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!

TAGGED:Why did Pawan Kalyan say not to compare him with Vijay?
Share This Article
Facebook Twitter Copy Link Print
Previous Article ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!
Next Article ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?