Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ: ವಿಜಯ್‌, ಸಿದ್ದರಾಮಯ್ಯಗೆ ಆಹ್ವಾನ
ಪ್ರಮುಖದೇಶ

ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ: ವಿಜಯ್‌, ಸಿದ್ದರಾಮಯ್ಯಗೆ ಆಹ್ವಾನ

Share
2 Min Read
SHARE

newsics.com/ನ್ಯೂಸಿಕ್ಸ್

ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ (ಯುನೈಟೆಡ್‌ ಡೆಮಾಕ್ರೆಟಿಕ್‌ ಫ್ರಂಟ್‌) ಭರ್ಜರಿ ಗೆಲುವು ಸಾಧಿಸಿದ್ದರೂ ಕಾಂಗ್ರೆಸ್‌ ಹೈ ಕಮಾಂಡ್‌ ಮಟ್ಟದಲ್ಲಿ ಹಗ್ಗಜಗ್ಗಾಟದ ನಡುವೆ ಅಳೆದು ತೂಗಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದೆ.

ಈಗ ಸರ್ಕಾರ ರಚನೆಗೆ ಪೂರ್ವತಯಾರಿ ನಡೆದಿದ್ದು, ಮೇ 18ರಂದು ತಿರುವನಂತಪುರದಲ್ಲಿ ನಡೆಯಲಿರುವ ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ.ಸತೀಶನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಲವು ಮಂದಿ ಕಾಂಗ್ರೆಸ್‌ ನಾಯಕರು ಆಗಮಿಸುವ ಸಾಧ್ಯತೆ ಇದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಹಲವು ಸಚಿವರು ಆಗಮಿಸುವ ನಿರೀಕ್ಷೆ ಇದೆ. ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್, ಬಿನೋಯ್ ವಿಶ್ವಂ ಸೇರಿ ಅನೇಕರು ಭಾಗವಹಿಸುವ ಸಾಧ್ಯತೆ ಇದೆ ಎಂದು ವಿ.ಡಿ.ಸತೀಶನ್‌ ಮಾಹಿತಿ ನೀಡಿದರು.

ಸಿಎಂ ವಿಜಯ್‌ ಭಾಗಿ ಅನುಮಾನ:
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್ ಅವರಿಗೂ ಆಹ್ವಾನ ನೀಡಿದ್ದು, ಅವರು ಭಾಗವಹಿಸುವ ಬಗ್ಗೆ ಯಾವುದೇ ಖಚಿತ ನಿರ್ಧಾರ ಹೊರಬಂದಿಲ್ಲ. ತಮಿಳುನಾಡು ಸಿಎಂ ವಿಜಯ್ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತಾರ ಎಂಬ ಪ್ರಶ್ನೆಗೆ, ” ವಿಜಯ್‌ ಅವರು ಆಗಮಿಸುವ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಇಲ್ಲ” ಎಂದು ನಿಯೋಜಿತ ಸಿಎಂ ವಿ.ಡಿ.ಸತೀಶನ್‌ ಹೇಳಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾಗವಹಿಸುವ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಆಹ್ವಾನ
ಕೇರಳಂ ನೂತನ ಮುಖ್ಯಮಂತ್ರಿ ವಿ.ಡಿ.ಸತೀಶನ್‌, ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದು ಸೋಮವಾರ ಸಿದ್ದರಾಮಯ್ಯ ಅವರು ಕೇರಳಕ್ಕೆ ತೆರಳಲಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಾಕ್ಷಿಯಾಗುವಂತೆ ಸತೀಶನ್‌, ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಹಾಗಾಗಿ, ಅದರಲ್ಲಿ ಭಾಗವಹಿಸಲು ಸಿಎಂ ಕೇರಳಕ್ಕೆ ತೆರಳಿ, ಸಂಜೆ ವೇಳೆಗೆ ಬೆಂಗಳೂರಿಗೆ ಮರಳಲಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಸತೀಶನ್‌, ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಆಮಂತ್ರಿಸಿದ್ದರು.

ಸೋಮವಾರ ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿರುವ ಸಮಾರಂಭದಲ್ಲಿ ಸತೀಶನ್ ಅವರು ಕೆಲವು ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಒಟ್ಟು 140 ಸ್ಥಾನಗಳ ಪೈಕಿ 102 ಸ್ಥಾನಗಳ ಗೆದ್ದುಕೊಂಡಿದೆ.

ಮನೆಯಲ್ಲಿ ಜಿರಳೆಗಳ ಕಾಟವೇ; ಟೊಮೆಟೊದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಇಡಿ

TAGGED:Siddaramaiah invitedV.D. Satheesan sworn in as Kerala CM: Vijay
Share This Article
Facebook Twitter Copy Link Print
Previous Article ಮನೆಯಲ್ಲಿ ಜಿರಳೆಗಳ ಕಾಟವೇ; ಟೊಮೆಟೊದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಇಡಿ
Next Article ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?