newsics.com/ನ್ಯೂಸಿಕ್ಸ್
ಮುಂದಿನ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಹಾಗೂ ಭಾರಿ ಮಳೆಯ ಮುನ್ಸೂಚನೆ ಇರಲಿದ್ದು, ಒಳನಾಡಿಗೆ ಆರೆಂಜ್ ಅಲರ್ಟ್ ಮತ್ತು ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಆಲಿಕಲ್ಲು ಜೊತೆಗೆ ವರುಣಾರ್ಭಟವಿರಲಿದ್ದು, ಈ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಈ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
Actress Nayanthara ಬ್ಲಾಕ್‌ಬಸ್ಟರ್ ಚಿತ್ರವನ್ನೇ ತಮ್ಮ ಕೆರಿಯರ್‌ನ ಅತ್ಯಂತ ಕೆಟ್ಟ ಸಿನಿಮಾ ಎಂದ ನಟಿ ನಯನತಾರಾ