newsics.com/ನ್ಯೂಸಿಕ್ಸ್
ಬೆಂಗಳೂರು: ಬುಧವಾರದಿಂದ BMTC ಮತ್ತು KSRTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ. ವೇತನ ಪರಿಷ್ಕರಣೆ ಮತ್ತು ಬಾಕಿ ಹಣಕ್ಕಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿರುವುದೇ ಇದಕ್ಕೆ ಕಾರಣ. ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತನ್ನ ನೌಕರರಿಗೆ ಬಿಗ್ ಶಾಕ್ ನೀಡಿದೆ. ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಸಂಸ್ಥೆ, ‘ಕೆಲಸವಿಲ್ಲದಿದ್ದರೆ ವೇತನವಿಲ್ಲ ನಿಯಮವನ್ನು ಜಾರಿಗೆ ತಂದಿದೆ.
ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ ಅಂದು ಯಾವುದೇ ವೇತನವನ್ನು ನೀಡಲಾಗುವುದಿಲ್ಲ.
ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮ ಜರುಗಿಸಲಾಗುವುದು.
ಮುಷ್ಕರದ ಅವಧಿಯಲ್ಲಿ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಮತ್ತು ಈಗಾಗಲೇ ರಜೆ ಪಡೆದಿರುವವರ ರಜೆಯನ್ನು (ಅತ್ಯಗತ್ಯ ಸಂದರ್ಭಗಳನ್ನು ಹೊರತುಪಡಿಸಿ) ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Vijayalakshmi ನಟ ದರ್ಶನ್ ಜಾಮೀನು ನಿರಾಕರಣೆ : ಭಾವುಕ ಪೋಸ್ಟ್ ಹಾಕಿ ವಿಜಯಲಕ್ಷ್ಮಿ ಕಣ್ಣೀರು