newsics.com/ನ್ಯೂಸಿಕ್ಸ್
ಬೀಜಿಂಗ್ : ಚೀನಾದ ಪ್ರಮುಖ ನಗರವಾದ ಲಿಯುಝೌನಲ್ಲಿ ಭೂಕಂಪ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ಧರೆಗುರುಳಿವೆ. ಹಲವಾರು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ನೂರಾರು ಜನರು ಸಿಲುಕಿಕೊಂಡಿರುವ ಆತಂಕ ಎದುರಾಗಿದೆ.
ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಜನರೆಲ್ಲಾ ನಿದ್ದೆಯಲ್ಲಿದ್ದಾಗ ಅಥವಾ ಮುಂಜಾನೆಯ ಕೆಲಸಗಳಲ್ಲಿದ್ದಾಗ ಇದ್ದಕ್ಕಿದ್ದಂತೆ ಭೂಮಿ ಕಂಪಿಸಲು ಪ್ರಾರಂಭಿಸಿದೆ. ಭೂಕಂಪದ ತೀವ್ರತೆಗೆ ನಗರದ ಹಲವು ವಸತಿ ಸಮುಚ್ಚಯಗಳು ಮತ್ತು ಕಚೇರಿ ಕಟ್ಟಡಗಳು ಕಣ್ಣಿನ ರೆಪ್ಪೆ ಮುಚ್ಚಿ ತೆರೆಯುವುದರೊಳಗೆ ನೆಲಸಮವಾಗಿವೆ. ರಸ್ತೆಗಳು ಬಿರುಕು ಬಿಟ್ಟಿದ್ದು, ವಿದ್ಯುತ್ ಮತ್ತು ಸಂವಹನ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಭೂಕಂಪ ಸಂಭವಿಸುತ್ತಿದ್ದಂತೆ ಚೀನಾ ಸರ್ಕಾರವು ವಿಪತ್ತು ನಿರ್ವಹಣಾ ಪಡೆ ಹಾಗೂ ಮಿಲಿಟರಿ ಯೋಧರನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ.
ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ಜೀವಂತವಾಗಿ ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.ಪ್ರಸ್ತುತ ಹಲವು ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.
Rakshita Shetty ಹೊಸ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟ ರಕ್ಷಿತಾ ಶೆಟ್ಟಿ