newsics.com/ನ್ಯೂಸಿಕ್ಸ್
ನವದೆಹಲಿ: ಜಾಗತಿಕ ಮಟ್ಟದಲ್ಲಿ ಎಬೋಲಾ ವೈರಸ್ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಭಾರತ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಹೈ-ಅಲರ್ಟ್ ಘೋಷಿಸಿದೆ.
ಮಾರಕ ವೈರಸ್ ದೇಶದೊಳಗೆ ಹರಡದಂತೆ ತಡೆಯಲು ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ಎಲ್ಲಾ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆಯನ್ನು ಗಣನೀಯವಾಗಿ ತೀವ್ರಗೊಳಿಸಿದೆ.
ಇದರೊಂದಿಗೆ ಕಣ್ಗಾವಲು ಮತ್ತು ಪ್ರಯೋಗಾಲಯಗಳ ಸನ್ನದ್ಧತೆಯನ್ನು ಉನ್ನತ ಮಟ್ಟಕ್ಕೆ ಹೆಚ್ಚಿಸಲಾಗಿದೆ. ಕೊರೊನಾ ಮಾದರಿಯಲ್ಲೇ ಈ ವೈರಸ್ ತಲ್ಲಣ ಮೂಡಿಸದಂತೆ ತಡೆಯಲು ಮುಂಚಿತವಾಗಿಯೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಎಬೋಲಾ ಪೀಡಿತ ದೇಶಗಳಿಂದ, ವಿಶೇಷವಾಗಿ ಆಫ್ರಿಕನ್ ರಾಷ್ಟ್ರಗಳಿಂದ ಭಾರತಕ್ಕೆ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲೇ ತೀವ್ರ ಥರ್ಮಲ್ ಸ್ಕ್ರೀನಿಂಗ್ ಮತ್ತು ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ.