newsics.com/ನ್ಯೂಸಿಕ್ಸ್
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಬಸ್ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಮುಷ್ಕರ ಮಾಡದಂತೆ ಸಾರಿಗೆ ಸಂಘಟನೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ನ್ಯಾಯಾಲಯ, ನಾಳೆ ಎಂದಿನಂತೆ ಬಸ್ ಸಂಚಾರ ಆರಂಭಿಸಲು ಆದೇಶಿಸಿದೆ.
ರಾಜ್ಯ ಸಾರಿಗೆ ನೌಕರರು ಕರೆ ನೀಡಿದ್ದ ಅನಿರ್ದಿಷ್ಟಾವಧಿ ಬಸ್ ಮುಷ್ಕರಕ್ಕೆ ಹೈಕೋರ್ಟ್ ತಕ್ಷಣವೇ ಜಾರಿಗೆ ಬರುವಂತೆ ತಡೆ ನೀಡಿದ್ದು, ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ಇರಲಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಮುಷ್ಕರವನ್ನು ನಿರ್ಬಂಧಿಸಿದ್ದು, ಸಾರಿಗೆ ಸಂಘಟನೆಗಳ ಬೇಡಿಕೆಗಳ ಕುರಿತು ತುರ್ತು ಚರ್ಚೆ ನಡೆಸುವಂತೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ನಾಳೆಯಿಂದ ಆರಂಭವಾಗಬೇಕಿದ್ದ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಖಡಕ್ ಬ್ರೇಕ್ ಹಾಕುವ ಮೂಲಕ ರಾಜ್ಯದ ಕೋಟ್ಯಂತರ ಪ್ರಯಾಣಿಕರಿಗೆ ಬಿಗ್ ರಿಲೀಫ್ ನೀಡಿದೆ. ಸಾರ್ವಜನಿಕರು ಹಾಗೂ ಶ್ರಮಿಕ ವರ್ಗಕ್ಕೆ ಆಗುವ ತೊಂದರೆಯನ್ನು ಪರಿಗಣಿಸಿ ಮುಷ್ಕರ ನಡೆಸದಂತೆ ಸಾರಿಗೆ ಒಕ್ಕೂಟಗಳಿಗೆ ಆದೇಶಿಸಿರುವ ಕೋರ್ಟ್, ಈ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದೆ.