newsics.com/ನ್ಯೂಸಿಕ್ಸ್
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದ್ದು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ತೀವ್ರವಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮತ್ತು ಕರಾವಳಿ ಭಾಗದಲ್ಲಿ ಮುಂದಿನ 2 ದಿನ ಬಿರುಸಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಮೇ 19ರಿಂದ ಮೇ 21ರವರೆಗೆ ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Petrol, diesel price hike ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್: ವಾರದಲ್ಲಿ 2ನೇ ಬಾರಿ ದರ ಹೆಚ್ಚಳ