newsics.com/ನ್ಯೂಸಿಕ್ಸ್
ಕಾಂಗೋ ಸೇರಿದಂತೆ ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ಹೀಗಾಗಿ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ.
ಡಾ. ದಿವ್ಯಾ ಅವರ ಪ್ರಕಾರ, ಪ್ರಸ್ತುತ ಔಟ್‌ಬ್ರೇಕ್ ಆಗಿರುವ ಎಬೋಲಾ ಬುಂಡಿಬುಗ್ಯೊ ತಳಿಗೆ ಯಾವುದೇ ಅಧಿಕೃತ ಲಸಿಕೆ ಅಥವಾ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ ಅತ್ಯಂತ ಹೆಚ್ಚಾಗಿದೆ. ಆದರೆ, ಇದು ಕೋವಿಡ್ ಮಹಾಮಾರಿಯಂತೆ ಗಾಳಿಯಲ್ಲಿ ಅತಿ ವೇಗವಾಗಿ ಪೆಂಡಾಮಿಕ್ ಆಗುವ ಸಾಧ್ಯತೆ ತೀರಾ ಕಡಿಮೆ. ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ ನೇರ ಸಂಪರ್ಕ ಅಗತ್ಯವಾಗುತ್ತದೆ.
ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ ನೇರ ಸಂಪರ್ಕ ಅಗತ್ಯವಾಗುತ್ತದೆ.
ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಆತಂಕ ಹೆಚ್ಚಿರುವ ಕಾಂಗೋ, ಉಗಾಂಡ ಮತ್ತು ಇತರೆ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಸ್ಕ್ರೀನಿಂಗ್ ನಡೆಸುವ ಜೊತೆಗೆ, ಅಗತ್ಯವಿದ್ದರೆ ಆಫ್ರಿಕಾ ಪ್ರವಾಸಿಗರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡುವುದು ದೇಶದ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅವಶ್ಯಕವಾಗಿದೆ.
ಎಬೀಲಾ ವೈರಸ್ ಸೋಂಕು ತಗುಲಿದ ನಂತರ ಆರಂಭದಲ್ಲಿ ತೀವ್ರ ಜ್ವರ, ತಲೆನೋವು, ಮೈಕೈನೋವು, ವಾಂತಿ ಮತ್ತು ಭೇದಿ ಕಂಡುಬರುತ್ತದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಲಿವರ್ ಮತ್ತು ಶ್ವಾಸಕೋಶದ ವೈಫಲ್ಯ ಸಂಭವಿಸಿ ಸಾವು ಸಂಭವಿಸಬಹುದು ಎಂದು ಹೇಳಲಾಗಿದೆ.
Jr NTR ಎನ್‌ಟಿಆರ್ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?