newsics.com/ನ್ಯೂಸಿಕ್ಸ್
ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಎಲ್ಲಾ ಮೆಟ್ರೋ ಮಾರ್ಗಗಳ ರೈಲು ಸೇವೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.
ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ ತಾಂತ್ರಿಕ ಮತ್ತು ಸುರಕ್ಷತಾ ಕಾರಣಗಳಿಗಾಗಿ ರೈಲುಗಳ ವೇಗವನ್ನು ನಿಯಂತ್ರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನಿಲ್ದಾಣಗಳಿಗೆ ಮೆಟ್ರೋ ರೈಲುಗಳು ತಡವಾಗಿ ತಲುಪುತ್ತಿವೆ. ಇದರಿಂದಾಗಿ ಕಚೇರಿ ಮುಗಿಸಿ ಮನೆಗೆ ಮರಳುವ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲ ಉಂಟಾಗಿದೆ.
ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆ
“ನಗರದಲ್ಲಿ ಉಂಟಾಗಿರುವ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಮಾರ್ಗಗಳ ಮೆಟ್ರೋ ಸೇವೆಯಲ್ಲಿ ವಿಳಂಬ ಉಂಟಾಗಿದೆ. ನಮಗೆ ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಬಿಎಂಆರ್‌ಸಿಎಲ್ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಸಾರ್ವಜನಿಕರಿಗೆ ಉಂಟಾಗಿರುವ ಈ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ.” – ಬಿಎಂಆರ್‌ಸಿಎಲ್ (BMRCL) ಪತ್ರಿಕಾ ಪ್ರಕಟಣೆ.
ಮಳೆ ಮತ್ತು ಗಾಳಿಯ ತೀವ್ರತೆ ಕಡಿಮೆಯಾದ ತಕ್ಷಣವೇ ಮೆಟ್ರೋ ರೈಲು ಸಂಚಾರವನ್ನು ಎಂದಿನಂತೆ ಯಥಾಸ್ಥಿತಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿಯವರೆಗೆ ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಲ್ಲಿ ಸಹನೆಯಿಂದ ಇರುವಂತೆ ಹಾಗೂ ಪ್ರಕಟಣೆಗಳನ್ನು ಗಮನಿಸುವಂತೆ ಕೋರಲಾಗಿದೆ.
ಆನ್ಲೈನ್ನಲ್ಲಿ ಕಾರ್ ಬಾಡಿಗೆ ಬುಕ್ ಮಾಡಲು ಹೋಗಿ 99 ಸಾವಿರ ರೂ ಕಳೆದುಕೊಂಡ ವ್ಯಕ್ತಿ