Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜೂ ಎನ್​ಟಿಆರ್ ತೂಕ ಇಳಿಸಿಕೊಳ್ಳಲು ಕಾರಣವೇನು?; ಪ್ರಶಾಂತ್ ನೀಲ್ ಹೇಳಿದ್ದೇನು?
ಪ್ರಮುಖಮನರಂಜನೆ

ಜೂ ಎನ್​ಟಿಆರ್ ತೂಕ ಇಳಿಸಿಕೊಳ್ಳಲು ಕಾರಣವೇನು?; ಪ್ರಶಾಂತ್ ನೀಲ್ ಹೇಳಿದ್ದೇನು?

Share
2 Min Read
SHARE

newsics.com/ನ್ಯೂಸಿಕ್ಸ್

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (JR NTR) ಇತ್ತೀಚಿನ ದಿನಗಳಲ್ಲಿ ಅತಿಯಾಗಿ ತೆಳ್ಳಗಾಗಿ ಕಾಣಿಸಿಕೊಂಡಿದ್ದಾರೆ. ಇದು ಅವರ ಆರೋಗ್ಯದ ಬಗ್ಗೆ ಸಾಕಷ್ಟು ಆತಂಕ ಮೂಡಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹತ್ತಾರು ಪ್ರಶ್ನೆಗಳು ಎದ್ದಿದ್ದವು. ಆದರೆ, ಅವರು ಈ ರೀತಿ ಬದಲಾಗಲು ಯಾವುದೇ ಅನಾರೋಗ್ಯ ಕಾರಣವಲ್ಲ, ಬದಲಿಗೆ ತಮ್ಮ ಮುಂಬರುವ ಚಿತ್ರದ ಪಾತ್ರಕ್ಕಾಗಿ ಅವರು ಮಾಡಿದ ಕಠಿಣ ಪರಿಶ್ರಮ ಕಾರಣ ಎಂಬ ಅಸಲಿ ರಹಸ್ಯವನ್ನು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈಗ ಬಹಿರಂಗಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಶಾಂತ್ ನೀಲ್, ‘ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಮುಗಿಸಿ ಶೂಟಿಂಗ್ ಆರಂಭಿಸಲು ನಾವು ಸಿದ್ಧರಾಗಿದ್ದೆವು. ಆ ಸಮಯದಲ್ಲಿ ಜೂನಿಯರ್ ಎನ್​​ಟಿಆರ್ ಅವರಿಗೆ ಒಂದು ಲುಕ್ ಟೆಸ್ಟ್ ಮಾಡಲಾಯಿತು. ಆ ಲುಕ್ ಟೆಸ್ಟ್ ಮುಗಿದ ನಂತರ, ನಾನು ಅವರ ಬಳಿ ಹೋಗಿ, ನೀವು ನಿರ್ವಹಿಸುತ್ತಿರುವ ಹಂತಕ ಪಾತ್ರಕ್ಕೆ ಸ್ವಲ್ಪ ತೆಳ್ಳಗಾದರೆ ಚೆನ್ನಾಗಿರುತ್ತದೆ, ಅದು ಚಿತ್ರಕ್ಕೆ ಸಹಾಯ ಮಾಡುತ್ತದೆ ಎಂದು ಕೇವಲ ಒಂದು ಮಾತು ಹೇಳಿದ್ದೆ’ ಎಂದಿದ್ದಾರೆ.

ನಿರ್ದೇಶಕರು ಹೇಳಿದ ಆ ಒಂದು ಮಾತನ್ನು ಜೂನಿಯರ್ ಎನ್​​ಟಿಆರ್ ಅತ್ಯಂತ ಗಂಭೀರವಾಗಿ ತೆಗೆದುಕೊಂಡರಂತೆ. ‘ಮುಂದಿನ ನಾಲ್ಕು ತಿಂಗಳುಗಳ ಕಾಲ ಅವರು ಶೂಟಿಂಗ್ ಮಾಡದೆ ಕೇವಲ ತೂಕ ಇಳಿಸಿಕೊಳ್ಳುವತ್ತಲೇ ಗಮನ ಹರಿಸಿದರು. ನೋಡನೋಡುತ್ತಿದ್ದಂತೆ ಅವರು ಬರೋಬ್ಬರಿ 15 ರಿಂದ 16 ಕೆಜಿಯಷ್ಟು ತೂಕವನ್ನು ಇಳಿಸಿಕೊಂಡರು. ನೀವು ಬರೆದಿರುವ ಕಥೆಗೆ ಮತ್ತು ನಿಮ್ಮ ಕಲ್ಪನೆಗೆ ತಕ್ಕಂತೆ ನಾನು ಬದಲಾಗುತ್ತೇನೆ ಎಂದು ಹಠಕ್ಕೆ ಬಿದ್ದವರಂತೆ ಜೂನಿಯರ್ ಎನ್​​ಟಿಆರ್ ಪರಿಶ್ರಮ ಪಟ್ಟರು’ ಎಂದು ನೀಲ್ ನೆನಪಿಸಿಕೊಂಡಿದ್ದಾರೆ.

ಒಂದು ಹಂತದಲ್ಲಿ ಎನ್​​ಟಿಆರ್ ತುಂಬಾ ಸುಸ್ತಾಗಿ, ಪೇಲವವಾಗಿ ಕಾಣಿಸಲು ಆರಂಭಿಸಿದಾಗ ಪ್ರಶಾಂತ್ ನೀಲ್ ಅವರೇ ಗಾಬರಿಯಾಗಿ, ತೂಕ ಇಳಿಸುವುದನ್ನು ನಿಲ್ಲಿಸುವಂತೆ ಹಲವು ಬಾರಿ ಮನವಿ ಮಾಡಿದ್ದರಂತೆ. ಅಷ್ಟೇ ಅಲ್ಲದೆ, ಎನ್​​ಟಿಆರ್ ಅವರ ಈ ಕಠಿಣ ಡಯಟ್ ನೋಡಿ ಅವರ ಪತ್ನಿ, ತಾಯಿ, ಸ್ನೇಹಿತರು ಹಾಗೂ ಪ್ರಶಾಂತ್ ನೀಲ್ ಅವರ ಇಡೀ ಚಿತ್ರತಂಡವೇ ನೀಲ್ ಅವರ ಮೇಲೆ ಕೋಪ ಮಾಡಿಕೊಂಡಿತ್ತಂತೆ. ಸಿನಿಮಾ ಪಾತ್ರಕ್ಕಾಗಿ ಎನ್​​ಟಿಆರ್ ಅನುಭವಿಸಿದ ಆ ನಾಲ್ಕು ತಿಂಗಳ ಕಷ್ಟ ಮತ್ತು ಅವರಲ್ಲಿದ್ದ ಆ ಹಠ ಬೇರೆಲ್ಲೂ ನೋಡಲು ಸಾಧ್ಯವಿಲ್ಲ ಎಂದು ಪ್ರಶಾಂತ್ ನೀಲ್ ಕೊಂಡಾಡಿದ್ದಾರೆ.

https://x.com/whynotcinemass_/status/2057108369933291671?ref_src=twsrc%5Etfw%7Ctwcamp%5Etweetembed%7Ctwterm%5E2057108369933291671%7Ctwgr%5E2fdfcacff5b91de8c0bea527009d4ad580ccd1d5%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಕಾರಿನೊಳಗೆ ನಕಲಿ ಮದುವೆ ಜೋಡಿ, ಚೆಕ್​ ಮಾಡಿದಾಗ ಪೊಲೀಸರಿಗೆ ಸಿಕ್ಕಿದ್ದೇ ಬೇರೆ!

TAGGED:What is the reason for Jr NTR's weight loss?; What did Prashanth Neel say?
Share This Article
Facebook Twitter Copy Link Print
Previous Article ಕಾರಿನೊಳಗೆ ನಕಲಿ ಮದುವೆ ಜೋಡಿ, ಚೆಕ್​ ಮಾಡಿದಾಗ ಪೊಲೀಸರಿಗೆ ಸಿಕ್ಕಿದ್ದೇ ಬೇರೆ!
Next Article ಬಿಜೆಪಿಯ ಸುವರ್ಣಯುಗ ಇನ್ನೂ ಮುಗಿದಿಲ್ಲ; ಕಾಂಗ್ರೆಸ್ ಬಗ್ಗೆ ಎಕ್ಸಿಸ್ ಮೈ ಇಂಡಿಯಾ ಮುಖ್ಯಸ್ಥ ಹೇಳಿದ್ದೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?