newsics.com/ನ್ಯೂಸಿಕ್ಸ್
ಸದ್ಯ ಭಾರತದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಾರ್ಟಿ ಎಂದರೆ, ಅದು ಕಾಕ್ರೋಚ್ ಜನತಾ ಪಾರ್ಟಿ. ಬರೋಬ್ಬರಿ 2 ಕೋಟಿಗೂ ಹೆಚ್ಚು ಫಾಲೋವರ್ಸ್ ಹೊಂದುವ ಮೂಲಕ ಸದ್ದು ಮಾಡ್ತಿದೆ.
ಈ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ ಹೆಸರಲ್ಲಿ ಟೌನ್‌ಹಾಲ್ ಮುಂದೆ ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ಪೋಸ್ಟ್ ವೈರಲ್ ಆದ ಹಿನ್ನೆಲೆ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ರೀತಿಯಾಗಿ ಅಕ್ರಮವಾಗಿ ಸೇರಿದ್ರೆ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಕರ್ನಾಟಕ ಎಂಬ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದು ವೈರಲ್ ಆಗಿತ್ತು. ಮಾನವ ಸರಪಳಿಗೆ ಕರೆ ಕೊಟ್ಟು ಪೋಸ್ಟ್ ಮಾಡಲಾಗಿತ್ತು.
ಬೆಂಗಳೂರು ಟೌನ್‌ಹಾಲ್ ಮುಂಭಾಗದಲ್ಲಿ ‘ಶಾಂತಿಯುತ ಮಾನವ ಸರಪಳಿ’ಗೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿತ್ತು, ಆದ್ರೆ ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ
ಈ ರೀತಿಯಾದ ಕಾರ್ಯಕ್ರಮಕ್ಕೆ ಯಾವುದೇ ಅರ್ಜಿ ಬಂದಿಲ್ಲ, ಪೊಲೀಸ್ ಇಲಾಖೆಯು ಅನುಮತಿ ನೀಡಿಲ್ಲ. GBAಯಿಂದಲೂ ಜಾಗಕ್ಕೆ ಅನುಮತಿ ಇಲ್ಲ, ಹೈಕೋರ್ಟ್ ಆದೇಶದಂತೆ ಫ್ರೀಡಂ ಪಾರ್ಕ್ ಬಿಟ್ಟು ಬೇರೆ ಕಡೆ ಪ್ರತಿಭಟನೆ ಮಾಡಲು ಅವಕಾಶವಿಲ್ಲ, ಇನ್ನು ಈ ಮೆಸೇಜ್ ಅನ್ನು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾ, ಟ್ವಿಟರ್ನಲ್ಲಿ ಶೇರ್/ಫಾರ್ವರ್ಡ್ ಮಾಡಿದ್ರೂ ಕಾನೂನು ಕ್ರಮವೆಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಸಾರ್ವಜನಿಕರು ತಿಳಿದೋ ತಿಳಿಯದೆಯೋ ಟೌನ್‌ಹಾಲ್ ಬಳಿ ಗುಂಪು ಸೇರಬಾರದು ಎಂದು ಕಾನೂನಿನ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿ ನಿಯಮ ಉಲ್ಲಂಘನೆ ಮಾಡಿದ್ರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.