Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಕರ್ನಾಟಕ

ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನೈರುತ್ಯ ಮುಂಗಾರು  ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಿಗೆ ವಿಸ್ತರಿಸಿದ್ದು, ಕರ್ನಾಟಕದಾದ್ಯಂತ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಗಾಳಿ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ನೈರುತ್ಯ ಮುಂಗಾರು ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಅಂಡಮಾನ್ ಸಮುದ್ರದ ಬಹುತೇಕ ಭಾಗಗಳನ್ನು ಆವರಿಸಿರುವ ಮುಂಗಾರು, ಮುಂದಿನ 3-4 ದಿನಗಳಲ್ಲಿ ಅರಬ್ಬಿ ಸಮುದ್ರದ ಮತ್ತಷ್ಟು ಭಾಗಗಳಿಗೆ ಪ್ರವೇಶಿಸಲಿದೆ. ಪ್ರಸ್ತುತ ಬಂಗಾಳ ಕೊಲ್ಲಿಯ ಆಗ್ನೇಯ ಮತ್ತು ಮಧ್ಯಭಾಗದಲ್ಲಿ ವಾಯುಭಾರ ಕುಸಿತದ ಸುಳಿವು ಕಂಡುಬಂದಿದ್ದು, ಇದು ಮಳೆಯ ತೀವ್ರತೆಯನ್ನು ಹೆಚ್ಚಿಸಲಿದೆ.

ಮೇ 23ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯ ಜೊತೆಗೆ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದ ಜನತೆಗೆ ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದೆ. ಮೇ 23ರಂದು ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಜೊತೆಗೆ ಆಲಿಕಲ್ಲು ಬೀಳುವ ಸಾಧ್ಯತೆಯಿದೆ. ಮೇ 25ರಂದು ಕೂಡ ಒಳನಾಡಿನ ಹಲವೆಡೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಬೆಳಗಾವಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ವೇಗವಾದ ಗಾಳಿಯೊಂದಿಗೆ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 23 ರಿಂದ ಮೇ 27 ರವರೆಗೆ ಗುಡುಗು ಮತ್ತು ಮಿಂಚಿನ ಸಹಿತ ಸಾಧಾರಣ ಮಳೆಯಾಗಲಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಭಾರೀ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್

 

TAGGED:DharwadGadagMeteorological Department issues hailstorm warning in Bagalkot
Share This Article
Facebook Twitter Copy Link Print
Previous Article ಭಾರೀ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್
Next Article ಕೋಪ ಮಾಡಿಕೊಳ್ಳುವುದರಿಂದ ಆಗುವ ಪರಿಣಾಮಗಳೇನು?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?