Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಲಿಸುವ ರೈಲಿನಿಂದ ಹಸುಗೂಸನ್ನು ಹೊರಗೆಸೆದ ಹೆತ್ತ ತಾಯಿ; ಹಳಿಯ ಮೇಲೆ ಬಿದ್ದು ಛಿದ್ರಗೊಂಡ ಶಿಶು
ದೇಶಪ್ರಮುಖ

ಚಲಿಸುವ ರೈಲಿನಿಂದ ಹಸುಗೂಸನ್ನು ಹೊರಗೆಸೆದ ಹೆತ್ತ ತಾಯಿ; ಹಳಿಯ ಮೇಲೆ ಬಿದ್ದು ಛಿದ್ರಗೊಂಡ ಶಿಶು

Share
1 Min Read
SHARE
newsics.com/ನ್ಯೂಸಿಕ್ಸ್
ಜಾರ್ಖಂಡ್: ಹೆತ್ತ ತಾಯಿಯೇ ತನ್ನ ಒಂದೂವರೆ ತಿಂಗಳ ಹಸುಗೂಸನ್ನು ಚಲಿಸುವ ರೈಲಿನ ಕಿಟಕಿಯಿಂದ ಹೊರಗೆಸೆದು ಹತ್ಯೆ ಮಾಡಿರುವ  ಘಟನೆ ಹೌರಾ-ಬಾರ್ಬಿಲ್ ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನಡೆದಿದೆ. ರೈಲ್ವೆ ಹಳಿ ಮೇಲೆ ಬಿದ್ದ ಮುಗ್ಧ ಶಿಶು ಸ್ಥಳದಲ್ಲೇ ಛಿದ್ರಗೊಂಡು ದಾರುಣವಾಗಿ ಮೃತಪಟ್ಟಿದೆ.
https://youtube.com/shorts/oxG_qF7R-Uk?si=JE07iFXT2HXfqNFI
ರೈಲ್ವೆ ರಕ್ಷಣಾ ಪಡೆ ಮಗುವಿನ ಶವವನ್ನು ಪತ್ತೆ ಮಾಡಿದ್ದು, ಆರೋಪಿ ತಾಯಿಯನ್ನು ಬಂಧಿಸಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ರೈಲಿನಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಆದರೆ, ಇದ್ದಕ್ಕಿದ್ದಂತೆ ಸೀಟಿನಿಂದ ಎದ್ದ ಮಹಿಳೆ, ತನ್ನ ಕಂಕುಳಲ್ಲಿ ಮಲಗಿದ್ದ ಒಂದೂವರೆ ತಿಂಗಳ ಹಸುಗೂಸನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ಹೊರಗೆಸೆದಿದ್ದಾಳೆ. ಇದನ್ನು ಕಂಡು ಸಹ ಪ್ರಯಾಣಿಕರು ಅರೆಕ್ಷಣ ತಬ್ಬಿಬ್ಬಾಗಿ ತಡೆಯುವಷ್ಟರಲ್ಲೇ, ಆಕೆ ತನ್ನ ಮೂರು ವರ್ಷದ ಮತ್ತೊಂದು ಮಗುವನ್ನೂ ಕಿಟಕಿಯಿಂದ ಹೊರಗೆ ತಳ್ಳಲು ಯತ್ನಿಸಿದ್ದಾಳೆ.

ತಕ್ಷಣ ಎಚ್ಚೆತ್ತ ಪ್ರಯಾಣಿಕರು ಮಹಿಳೆಯನ್ನು ಬಲವಂತವಾಗಿ ಹಿಂದಕ್ಕೆ ಎಳೆದು ಹಿಡಿದು, ಆ ಮಗುವಿನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಸಿನಿ ಪೋಸ್ಟ್‌ನ ಆರ್‌ಪಿಎಫ್ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದು ಹಳಿಗಳ ಉದ್ದಕ್ಕೂ ತೀವ್ರ ಶೋಧ ನಡೆಸಿದ್ದಾರೆ. ಸುಮಾರು ಒಂದು ಗಂಟೆಯ ಸತತ ಹುಡುಕಾಟದ ಬಳಿಕ, ಹಳಿಗಳ ಪಕ್ಕದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಈ ಕರುಣಾಜನಕ ದೃಶ್ಯ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸಾರ್ವಜನಿಕರ ಕಣ್ಣಲ್ಲಿ ನೀರು ತರಿಸಿತು.ಆರೋಪಿ ಮಹಿಳೆಯನ್ನು ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಮಜ್‌ಗಾಂವ್ ನಿವಾಸಿ ಮುದ್ರಾವತಿ ಗೋಪೆ ಅಲಿಯಾಸ್ ಹಸೀನಾ ಬೇಗಂ ಎಂದು ಗುರುತಿಸಲಾಗಿದೆ. ಈಕೆಯ ಪತಿ ಪಶ್ಚಿಮ ಬಂಗಾಳ ಮೂಲದ ಶಹಾಬುದ್ದೀನ್ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಶಹಾಬುದ್ದೀನ್ ನಾಲ್ಕು ವರ್ಷಗಳ ಹಿಂದೆ ಮುದ್ರಾವತಿಯನ್ನು ಅಪಹರಿಸಿದ್ದ ಎನ್ನಲಾಗಿದ್ದು, ಈ ಸಂಬಂಧ ಮಜ್‌ಗಾಂವ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಇಬ್ಬರೂ ವಿವಾಹವಾಗಿ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಯಾವುದೋ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ದಂಪತಿ, ಮಕ್ಕಳೊಂದಿಗೆ ತವರಿಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

https://www.newsics.com/2026/05/23/four-women-killed-in-tiger-attack/
TAGGED:Mother throws baby cow out of moving train; infant dies after falling onto tracks
Share This Article
Facebook Twitter Copy Link Print
Previous Article Tiger attack ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ
Next Article ಕ್ರೂಸರ್ ವಾಹನ- ಲಾರಿ ನಡುವೆ ಡಿಕ್ಕಿ : ಒಂದೇ ಕುಟುಂಬದ ಐವರು ಬಲಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?