newsics.com/ನ್ಯೂಸಿಕ್ಸ್
ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾ ಯುವಕನೊಬ್ಬ ಸಾರ್ವಜನಿಕವಾಗಿ ಬಿಯರ್ ಕುಡಿಯುತ್ತಿರುವ ಘಟನೆ ವಾರಣಾಸಿಯ ಘಾಟ್ ಸಮೀಪ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪವಿತ್ರ ನದಿಯನ್ನು ಅವಮಾನಿಸಬೇಡಿ ಎಂದು ಸ್ಥಳೀಯರು ಪ್ರಶ್ನಿಸಿದಾಗ, ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದು ಆ ಯುವಕ ಉತ್ತರಿಸುವುದು ವಿಡಿಯೋದಲ್ಲಿ ಕೇಳಿಸುತ್ತದೆ. ಆದರೆ, ಈ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದ್ದಂತೆಯೇ, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಗಳು ಕೇಳಿಬಂದಿವೆ.
ಈ ಸಂಬಂಧ ವಾರಣಾಸಿ ಪೊಲೀಸರು ಶುಕ್ರವಾರ (ಮೇ 22) ದಶಾಶ್ವಮೇಧ ಪೊಲೀಸ್ ಠಾಣೆಯಲ್ಲಿ ವಕೀಲ ಶಶಾಂಕ್ ತ್ರಿಪಾಠಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಹರಡುವುದು ಮತ್ತು ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಸೆಕ್ಷನ್‌ಗಳನ್ನು ಒಳಗೊಂಡ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Prashanth Neel ಅಪ್ಪುಗಾಗಿ ಪ್ರಶಾಂತ್ ನೀಲ್ ಬರೆದಿದ್ದ ಆ ಕಥೆ ಎಲ್ಲಿದೆ?