Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಛಾವಾ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದ ನಟ ರಣ್​​ದೀಪ್ : ಕಾರಣವೇನು?
ದೇಶಪ್ರಮುಖಮನರಂಜನೆ

ಛಾವಾ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದ ನಟ ರಣ್​​ದೀಪ್ : ಕಾರಣವೇನು?

Share
2 Min Read
SHARE

newsics.com/ನ್ಯೂಸಿಕ್ಸ್

ಒಂದು ಹಿಟ್ ಸಿನಿಮಾ ಕೊಟ್ಟು ಬಿಟ್ಟರೆ ಮುಂದಿನ ಹತ್ತು ವರ್ಷ ಅದರ ಬಲದಲ್ಲೇ ನಟರ ಜೀವನ ನಡೆದು ಹೋಗುತ್ತಿತ್ತು. ಇದೇ ಕಾರಣಕ್ಕ ನಟರುಗಳು ಯಾವುದೇ ದೊಡ್ಡ ಬಜೆಟ್​​ನ, ಭಿನ್ನ ಕತೆಯುಳ್ಳ ಸಿನಿಮಾಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಆದರೆ ಇಲ್ಲೊಬ್ಬ ಸ್ಟಾರ್ ನಟ, ಸಿನಿಮಾ ದೊಡ್ಡ ಹಿಟ್ ಆಗುತ್ತದೆ ಎಂದು ಗೊತ್ತಿದ್ದರೂ ಸಿನಿಮಾದಲ್ಲಿ ತಮಗೆ ಆಫರ್ ಮಾಡಲಾಗಿದ್ದ ಪ್ರಮುಖ ಪಾತ್ರದಲ್ಲಿ ನಟಿಸಲು ಒಲ್ಲೆ ಎಂದರಂತೆ.

ಬಾಲಿವುಡ್‌ನ ಬಹುಮುಖ ಪ್ರತಿಭೆಯ ನಟ ರಣದೀಪ್ ಹೂಡಾ ತಮ್ಮ ವಿಭಿನ್ನ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ವಿಶೇಷ ಗುರುತು ಮೂಡಿಸಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ರಣ್​​ದೀಪ್ ನಟಿಸಿದ್ದಾರೆ. ನಾಯಕನಾಗಿ, ಪೋಷಕ ನಟನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲೂ ರಣ್​​ದೀಪ್ ನಟಿಸಿದ್ದಾರೆ.

2025 ರಲ್ಲಿ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆದ ‘ಛಾವಾ’ ಸಿನಿಮಾನಲ್ಲಿ ಅತ್ಯಂತ ಪ್ರಮುಖ ಪಾತ್ರದಲ್ಲಿ ನಟಿಸುವ ಆಫರ್ ರಣ್​​ದೀಪ್ ಹೂಡ ಅವರಿಗೆ ನೀಡಲಾಗಿತ್ತು. ಆದರೆ ಅವರು ಒಲ್ಲೆ ಎಂದರು. ‘ಛಾವಾ’ ಸಿನಿಮಾದ ವಿಲನ್, ಕ್ರೂರ ಮೊಘಲ್ ದೊರೆ ಔರಂಗಜೇಬ್ ಪಾತ್ರಕ್ಕಾಗಿ ಮೊದಲು ರಣದೀಪ್ ಹೂಡಾ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ, ಅವರು ಈ ಬ್ಲಾಕ್‌ಬಸ್ಟರ್ ಚಿತ್ರದ ಆಫರ್ ಅನ್ನು ತಿರಸ್ಕರಿಸಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಈ ನಿರ್ಧಾರದ ಹಿಂದಿನ ಅಸಲಿ ಕಾರಣವನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಣದೀಪ್ ಹೂಡಾ, ‘ನನಗೆ ‘ಛಾವಾ’ ಚಿತ್ರದಲ್ಲಿ ಔರಂಗಜೇಬ್ ಪಾತ್ರದ ಆಫರ್ ಬಂದಿದ್ದು ನಿಜ. ಚಿತ್ರದ ಕಥೆ ಮತ್ತು ಆ ಪಾತ್ರ ಎರಡೂ ತುಂಬಾ ಬಲವಾಗಿದ್ದವು. ಆದರೆ ಆ ಸಮಯದಲ್ಲಿ ನಾನು ನನ್ನದೇ ಆದ ಸ್ವಂತ ಸಿನಿಮಾ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದ ನಿರ್ದೇಶನ ಮತ್ತು ನಟನೆಯಲ್ಲಿ ಸಂಪೂರ್ಣವಾಗಿ ಬ್ಯುಸಿಯಾಗಿದ್ದೆ, ಸಾವರ್ಕರ್ ಚಿತ್ರಕ್ಕಾಗಿ ನಾನು ತುಂಬಾ ತೂಕ ಇಳಿಸಿಕೊಂಡಿದ್ದೆ ಮತ್ತು ದೈಹಿಕವಾಗಿ ಸಾಕಷ್ಟು ಬದಲಾಗಿದ್ದೆ. ಆ ಒಂದು ಯೋಜನೆಯ ಮೇಲೆ ನಾನು ಎಷ್ಟು ಗಮನ ಹರಿಸಿದ್ದೆ ಎಂದರೆ, ಅದೇ ಸಮಯದಲ್ಲಿ ಮತ್ತೊಂದು ದೊಡ್ಡ ಸಿನಿಮಾಗೆ ಹಾಗೂ ಅಷ್ಟೇ ತೂಕದ ಪಾತ್ರಕ್ಕೆ ನ್ಯಾಯ ಒದಗಿಸುವುದು ನನಗೆ ಸಾಧ್ಯವಿರಲಿಲ್ಲ. ಆ ಕಾರಣದಿಂದಾಗಿಯೇ ನಾನು ‘ಛಾವಾ’ ಚಿತ್ರದ ಆಫರ್ ಅನ್ನು ಅತ್ಯಂತ ಗೌರವಪೂರ್ವಕವಾಗಿ ನಿರಾಕರಿಸಬೇಕಾಯಿತು’ ಎಂದು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದದಲ್ಲಿ ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ

TAGGED:Actor Randeep refused to act in the movie Chhava
Share This Article
Facebook Twitter Copy Link Print
Previous Article ಉತ್ತರ ಪ್ರದೇಶದದಲ್ಲಿ ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ
Next Article ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?