newsics.com/ನ್ಯೂಸಿಕ್ಸ್
ಬೆಂಗಳೂರು: . ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಿತಿನ್ ನಬಿನ್ ಕರ್ನಾಟಕಕ್ಕೆ ಅವರ ಮೊದಲ ಬಾರಿಗೆ ಆಗಮಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ತಡರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಹೂಗುಚ್ಛ ನೀಡಿ, ಶಾಲು ಹೊದಿಸಿ ಸ್ವಾಗತಿಸಿದರು. ಅಲ್ಲಿಂದ ಹೆಬ್ಬಾಳದ ಖಾಸಗಿ ಹೋಟೆಲ್ ಗೆ ತೆರಳಿ ವಾಸ್ತವ್ಯ ಹೂಡಿದರು,
ಇಂದು ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಬಿಎಸ್ವೈ ನಿವಾಸದಲ್ಲಿ ಉಪಾಹಾರ ಸೇವಿಸಲಿರುವ ನಿತಿನ್ ನಬಿನ್, ನಂತರ ಮಲ್ಲೇಶ್ವರಂನ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಲಿದ್ದಾರೆ. ಆ ಬಳಿಕ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಬಿಜೆಪಿ ಕಚೇರಿಯಲ್ಲಿ ನಿತಿನ್ ನಬಿನ್ ಸರಣಿ ಹೈವೋಲ್ಟೇಜ್ ಸಭೆಗಳನ್ನು ನಡೆಸಲಿದ್ದಾರೆ. ರಾಜ್ಯದ ಹಾಲಿ, ಮಾಜಿ ಶಾಸಕರು, ಸಂಸದರು, ಎಂಎಲ್ ಸಿಗಳ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
Actor Rakshit Shetty ನಟ ರಕ್ಷಿತ್ ಶೆಟ್ಟಿ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ