newsics.com/ನ್ಯೂಸಿಕ್ಸ್
ಧಾರವಾಡ: ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಕೇರಳಕ್ಕೆ ತಲುಪುವ ಸಾಧ್ಯತೆಯಿದ್ದು, ಜೂನ್ 1 ರ ವೇಳೆಗೆ ಕರ್ನಾಟಕ ರಾಜ್ಯಕ್ಕೆ ಮುಂಗಾರು ಮಾರುತಗಳು ಅಧಿಕೃತವಾಗಿ ಎಂಟ್ರಿ ಕೊಡಲಿವೆ ಎಂದು ವರದಿ ಮುನ್ಸೂಚನೆ ನೀಡಿದೆ.
ಕಳೆದ ರಾತ್ರಿಯಿಂದಲೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆರಂಭವಾಗಿದ್ದು, ಇಂದಿನಿಂದ (ಮೇ 24) ಮುಂದಿನ ಮೂರು ದಿನಗಳ ಕಾಲ ರಾಜ್ಯದ ಉತ್ತರ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಛಾವಾ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದ ನಟ ರಣ್ದೀಪ್ : ಕಾರಣವೇನು?