Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ‌ಭವಿಷ್ಯ, 24-05-2026, ಭಾನುವಾರ, ನಿಮ್ಮ ಇಂದಿನ ಭವಿಷ್ಯ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ‌ಭವಿಷ್ಯ, 24-05-2026, ಭಾನುವಾರ, ನಿಮ್ಮ ಇಂದಿನ ಭವಿಷ್ಯ ಹೇಗಿದೆ?

Share
4 Min Read
SHARE

newsics.com/ನ್ಯೂಸಿಕ್ಸ್

ಶುಭೋದಯ

ಇಂದಿನ ಪಂಚಾಂಗ/ ರಾಶಿ ಭವಿಷ್ಯ

24-05-2026, ಭಾನುವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಅಧಿಕ ಜ್ಯೇಷ್ಠ ಮಾಸ ಶುಕ್ಲಪಕ್ಷದ ನವಮಿ.

 

ಇಂದಿನ ಪಂಚಾಂಗ

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಅಷ್ಟಮಿ/ನವಮಿ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಧ್ರುವ, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:10 – 18:46, ಯಮಗಂಡ ಕಾಲ 12:21 – 13:57, ಗುಳಿಕ ಕಾಲ 15:34 – 17:10

===========

ಇಂದಿನ ರಾಶಿ ಭವಿಷ್ಯ

ಮೇಷ

ಹಿತಶತ್ರುಗಳು ಸೋಲನ್ನು ಒಪ್ಪಿದರೂ ಇನ್ನೊಂದು ರೀತಿಯಲ್ಲಿ ಗೆಲ್ಲುವ ಯೋಜನೆ ಮಾಡುವರು. ಗಳಿಸಿಕೊಂಡ‌ ಭಾವಕ್ಕಿಂತ ಉಳಿಸಿಕೊಂಡ ಭಾವವೇ ಮೇಲು. ನಿಮ್ಮ ಸಂಕೀರ್ಣವಾದ ಕಾರ್ಯವು ಮುಕ್ತಾಗೊಳ್ಳುವುದು. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ನಿಮ್ಮ ಮನಸ್ಸಿಗೆ ಬಾರದೇ ಯಾವುದನ್ನೂ ಒಪ್ಪಿಕೊಳ್ಳಲಾರಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಾಗುವುದು.

ವೃಷಭ 

ನಿಮ್ಮನ್ನು ಜ್ಞಾನವನ್ನು ಪ್ರದರ್ಶಿಸುವ ಅವಕಾಶ ಸಿಗಬಹುದು. ಹೆಚ್ಚಿನ ಶ್ರದ್ಧೆ ಮತ್ತು ತಿಳುವಳಿಕೆಯಿಂದ ನೀವು ಪ್ರಯೋಜನ ಪಡೆಯುತ್ತೀರಿ. ಇಂದು ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಸ್ನೇಹವನ್ನು ಉಳಿಸಿಕೊಳ್ಳಲಾಗದು. ಕಲಿಕೆಯ ವಿಚಾರದಲ್ಲಿ ನೀವು ಎಂದಿಗಿಂತ ಹೆಚ್ಚು ಪ್ರಯತ್ನಶೀಲರು. ವಿವೇಚನೆ ಹೆಚ್ಚಲಿದೆ. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು.

ಮಿಥುನ 

ಕಷ್ಟಗಳನ್ನು ಹಂಚಿಕೊಂಡು ಹಿರಿಯರೊಂದಿಗೆ ಆತ್ಮೀಯತೆ ಬೆಳೆಯಲಿದೆ. ಕುಟುಂಬದ ಸೆಳೆತದಿಂದ ವಿದ್ಯಾಭ್ಯಾಸ ಹಾಳಾಗುವುದು. ವ್ಯಾಪಾರವನ್ನು ಬೆಳಗಿಸಲು ಅನೇಕ ಅವಕಾಶಗಳಿವೆ. ಆದರೆ ನಿಮ್ಮ ನಿರ್ಲಕ್ಷ್ಯವು ಕೆಲಸವನ್ನು ಹಾಳು ಮಾಡಬಹುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ಹಳೆಯ ರೋಗಗಳಿಂದ ನೀವು ಮುಕ್ತರಾದಂತೆ ತೋರುವುದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ.

ಕರ್ಕಾಟಕ 

ಅನಗತ್ಯ ಧೈರ್ಯವನ್ನು ತೋರಿಸುವುದನ್ನು ತಪ್ಪಿಸುವುದು ಸೂಕ್ತ. ನಿಮ್ಮ ವಸ್ತುಗಳನ್ನು ಜೋಪಾನ‌‌ ಮಾಡಿಕೊಳ್ಳಬೇಕು. ನೀವು ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ. ಅನುಭವಿ ಜನರನ್ನು ಸಂಪರ್ಕಿಸಲಾಗುವುದು. ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಯಾರ ಸಲಹೆ ಪಡೆಯದೇ ಮನಸ್ಸಿಗೆ ಬಂದಂತೆ ವ್ಯವಹರಿಸುವುದನ್ನು ಬಿಡಿ. ಸಂಗಾತಿಯ ಆರೋಗ್ಯವು ಹದ ತಪ್ಪುವುದು.

ಸಿಂಹ 

ನಿಮಗೆ ಆದಾಯದ ಹೊಸ ಮಾರ್ಗಗಳು ಕಂಡುಬರಬಹುದು. ಈ ಸಮಯದಲ್ಲಿ ದೊಡ್ಡ ಅವಕಾಶದ ಹುಡುಕಾಟವು ಪೂರ್ಣಗೊಳ್ಳುತ್ತದೆ. ಸಂಗಾತಿಯನ್ನು ಅಮೂಲ್ಯ ವಸ್ತುಗಳಿಂದ ಸುಮ್ಮನಾಗಿಸುವಿರಿ. ಆರಂಭದಲ್ಲಿ, ಕೆಲವು ಕೆಲಸಗಳನ್ನು ಯೋಚಿಸದೆ ಮಾಡಲಾಗುತ್ತದೆ ಮತ್ತು ಕೆಲವು ಪ್ರಜ್ಞಾಪೂರ್ವಕವಾಗಿ ಮುಂದುವರಿಯುತ್ತದೆ. ಇದು ಗುರಿಯ ಸಾಧನೆಗೆ ಅಥವಾ ಅನುಭವದ ಅನನ್ಯ ಕೊಡುಗೆಗೆ ಕಾರಣವಾಗುತ್ತದೆ. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು.

ಕನ್ಯಾ 

ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಸಿಗಲಿದೆ. ದಾನ ಮಾಡುವ ಮನೋಭಾವವು ಹೆಚ್ಚಾಗುತ್ತದೆ. ಅಭ್ಯಾಸವನ್ನು ಸೃಜನಾತ್ಮಕವಾಗಿ ಮಾಡಿಕೊಳ್ಳುವಿರಿ. ನೀವು ಇಂದು ಮಂಗಲಕಾರ್ಯವನ್ನು ಯೋಜಿಸುವಿರಿ. ಕೆಲವು ನಕಾರಾತ್ಮಕ ಸುದ್ದಿಗಳಿಂದಾಗಿ ನಿಮ್ಮ ಮನಸ್ಸು ಚಿಂತಿತವಾಗಬಹುದು. ನೀವು ಸಂತಾನದ ಸಂತೋಷವನ್ನು ಹೊಂದಿರುತ್ತೀರಿ. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು.

ತುಲಾ 

ಶಿಕ್ಷಣದ ಬಗ್ಗೆ ನಿಮಗಿರುವ ಆಸಕ್ತಿ ಮತ್ತಷ್ಟು ಅಧಿಕವಾಗಬಹುದು. ಸೂಕ್ತ ಸಮಯಕ್ಕೆ ಚಿಕಿತ್ಸೆಯಿಂದ ಆರೋಗ್ಯ ಚೆನ್ನಾಗಿ ಆಗುವುದು. ಮಕ್ಕಳ ಚಿಂತೆಯಿಂದ ಎಲ್ಲ ಸಂತೋಷಗಳು ಮರೆಯಾಗಲಿವೆ. ಯಾರ ನಕಾರಾತ್ಮಕ ವಿಚಾರವೂ ನಿಮಗೆ ಏನೂ ಮಾಡದು. ಅನವಶ್ಯಕವಾದ ಸಮಸ್ಯೆಗಳು ನಿಮ್ಮನ್ನು ಕಾಡಿಯಾವು. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಆತ್ಮವಿಶ್ವಾಸವನ್ನು ಉಳಿಸಿಕೊಳ್ಳುವಿರಿ. ಎಂದೋ ಆದ ಬೇಸರವನ್ನು ಸ್ನೇಹಿತನ ಮುಂದೆ ಇಂದು ಪ್ರಕಟಿಸುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು.

ವೃಶ್ಚಿಕ 

ವಿರೋಧಿಗಳ ಯೋಜನೆಗೆ ಬಲಿಯಾಗುವ ಸಾಧ್ಯತೆ ಇದೆ. ಸರಿಯಾದ ದಾರಿಯಿಂದ ಮಾತ್ರ ಗೆಲುವು ಸಿಗಲಿದೆ. ಅದರಿಂದ ತೃಪ್ತಿಯೂ ಆಗಲಿದೆ. ಸರ್ಕಾರಿ ಕೆಲಸಗಳು ವಿಳಂಬವಾಗುವುದು. ಅಹಂಕಾರದಿಂದ ಪರರ ಸಲಹೆಯನ್ನು ಸ್ವೀಕರಿಸಲಾರಿರಿ. ನೆಚ್ಚಿನ ಕಲಾವಿದರ ಭೇಟಿಯಾಗಲಿದೆ. ಆಪ್ತರಿಂದ ಉಡುಗೊರೆ ಸಿಗಲಿದೆ. ಸ್ವಲ್ಪ ಆಲಸ್ಯವು ನಿಮ್ಮ ಕೆಲಸವನ್ನು ಹಿಂದಿಕ್ಕುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ.

ಧನುಸ್ಸು

ನಿಮ್ಮ ಇಂದಿನ ಆರ್ಥಿಕ ಲೆಕ್ಕಾಚಾರ ಸರಿಯಾಗಲಿದೆ. ಸಹನೆಯ ನಿಮ್ಮ ಗುಣದಿಂದ ಸಾಕಷ್ಟು ಅನುಕೂಲವನ್ನು‌ ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆ ತಂದುಕೊಳ್ಳುವಿರಿ. ಹೊಸತನ್ನು ಕಲಿಯಬೇಕು ಎನದನುವ ತುಡಿತ ಇರಲಿದೆ. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಇಂದು ಮಾಡುವ ಎಲ್ಲ ಕಾರ್ಯಗಳನ್ನೂ ಪೂರ್ಣ ಮಾಡಲಾರಿರಿ. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು.

ಮಕರ 

ನಿಮಗೆ ಸಿಗುವ ಹೊಸ ಭರವಸೆಗಳು ಸಂತೋಷವನ್ನು ತರುತ್ತವೆ. ಭೂಮಿಯ ವ್ಯವಹಾರವನ್ನು ಮಾಡಲಿದ್ದೀರಿ. ಭೇಟಿಯಾಗುವ ವ್ಯಕ್ತಿಗಳಿಂದ ನಿಮ್ಮ ಉದ್ಯಮಕ್ಕೆ ಸಹಕಾರಿ. ಸೇವೆ ಮತ್ತು ದಾನದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹೊಸ ಸಂಪರ್ಕಗಳು ಪ್ರಯೋಜನಕಾರಿಯಾಗಲಿವೆ. ವಿದೇಶದ ಸಂಪರ್ಕವನ್ನು ಮಾಡಲು ಅವಕಾಶ ಸಿಗಲಿದೆ. ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ.

ಕುಂಭ 

ನಿಮ್ಮ ಜಾಣ್ಮೆಯಿಂದ ಆದಾಯದ ಪೂರ್ಣಲಾಭವನ್ನು ಮಾಡಿಕೊಳ್ಳುವಿರಿ. ಮನೆಯಲ್ಲಿ ಸಂತೋಷದ ವಾತಾವರಣವು ಇರುತ್ತದೆ. ಸಹೋದರನ ನಡವಳಿಕೆಯಿಂದ ಮನಸ್ಸಿಗೆ ಬೇಸರವಾಗಬಹುದು. ಆರ್ಥಿಕ ಯೋಗವಿದೆ. ತರಾತುರಿಯಲ್ಲಿ ಮಾಡಿದ ಕೆಲಸವು ಹಾನಿಯನ್ನುಂಟು ಮಾಡುತ್ತದೆ. ಮಗುವಿನ ನಡವಳಿಕೆಯು ನೋವನ್ನು ಉಂಟುಮಾಡುತ್ತದೆ. ಕಳ್ಳತನದ ಭೀತಿಯಿಂದ ವಸ್ತುಗಳನ್ನು ಜೋಪಾನ ಮಾಡಿಕೊಳ್ಳುವಿರಿ. ನಿಮಗೆ ಇರವುದು‌. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು.

ಮೀನ 

ತ್ವರಿತ ನಿರ್ಣಯದಿಂದ ನಿಂದನೆ. ಸೃಜನಶೀಲತಯಿಂದ ನಿಮ್ಮ ಮನಸ್ಸು ಅರಳುವುದು. ನಿಮ್ಮ ಪ್ರತಿಭೆಯಿಂದ ನೀವು ಅದ್ಭುತಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಿರಿಯರ ಅನುಭವದಿಂದ ಪ್ರಯೋಜನ ಪಡೆಯುವಿರಿ. ಅನಗತ್ಯ ವಾದಗಳನ್ನು ಮಾಡಿ, ಕುಟುಂಬದ ಸದಸ್ಯರನ್ನು ನೋಯಿಸುವಿರಿ. ಸೋಮಾರಿತನದಿಂದ ಸಮಯವು ವ್ಯರ್ಥವಾಗಲಿದೆ. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಇನ್ನೊಬ್ಬರನ್ನು ರಿಪೇರಿ ಮಾಡಲು ಹೋಗಿ ಸಮಯ ಹಾಳಾದೀತು.

 

ಮದುವೆಯನ್ನು ರೊಮ್ಯಾಂಟಿಕ್ ಮಾಡ್ಕೋಬೇಡಿ; ನಟಿ ರಿಧಿ ಡೋಗ್ರಾ

 

ಕೋಪ ಮಾಡಿಕೊಳ್ಳುವುದರಿಂದ ಆಗುವ ಪರಿಣಾಮಗಳೇನು?

TAGGED:#almanac #zodiac #prediction #24-05-2026 #sunday #horoscope #planetary #positions #news #newsics
Share This Article
Facebook Twitter Copy Link Print
Previous Article RBIಗೆ ದಾಖಲೆಯ 2.87 ಲಕ್ಷ ಕೋಟಿ ಲಾಭಾಂಶ, ಶೀಘ್ರವೇ ಕೇಂದ್ರಕ್ಕೆ ಹಸ್ತಾಂತರ
Next Article Shooting near white house ವೈಟ್‌ಹೌಸ್ ಸಮೀಪ ಗುಂಡಿನ ದಾಳಿ: ಭದ್ರತಾ ಸಿಬ್ಬಂದಿ ಪ್ರತಿದಾಳಿಯಲ್ಲಿ ಶಂಕಿತ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?