Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು
ಕರ್ನಾಟಕಪ್ರಮುಖ

ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 25, 26 ಮತ್ತು 29 ರಂದು ಉತ್ತರ ಒಳನಾಡಿನ (NIK) ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಲಿದೆ. ಆದರೆ, ಮೇ 27 ಮತ್ತು 28 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತ್ಯಂತ ಭೀಕರ ಪರಿಸ್ಥಿತಿ ಇರಲಿದ್ದು, ಗಂಟೆಗೆ ಭರೋಬ್ಬರಿ 50 ರಿಂದ 60 ಕಿ.ಮೀ ವೇಗದಲ್ಲಿ ಭೀಕರ ಬಿರುಗಾಳಿ (Gusty Wind) ಬೀಸುವ ಸಾಧ್ಯತೆ ಇದೆ. ಸಾರ್ವಜನಿಕರು ಹಳೆಯ ಕಟ್ಟಡ ಹಾಗೂ ಮರಗಳ ಬಳಿ ನಿಲ್ಲದಂತೆ ಸೂಚಿಸಲಾಗಿದೆ.

ಇತ್ತ ದಕ್ಷಿಣ ಒಳನಾಡಿನ (SIK) ಜಿಲ್ಲೆಗಳಲ್ಲಿಯೂ ಸಹ ಮೇ 25 ರಿಂದ ಮೇ 29 ರವರೆಗೆ ಕಠಿಣ ಹವಾಮಾನ ಇರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಇದರೊಂದಿಗೆ ಕರಾವಳಿ ಕರ್ನಾಟಕದ (Coastal Karnataka) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 26 ರಿಂದ ಮೇ 29 ರವರೆಗೆ ಸತತ ನಾಲ್ಕು ದಿನಗಳ ಕಾಲ ಭಾರಿ ಗುಡುಗು ಮತ್ತು ಸಿಡಿಲಿನ ಆರ್ಭಟ ಇರಲಿದೆ ಎಂದು ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಮೇ 29 ರವರೆಗೆ ಗುಡುಗು ಸಹಿತ ಮಳೆ:

ತೀವ್ರ ಉಷ್ಣಾಂಶ ಹಾಗೂ ಸುಡುವ ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಅತ್ಯಂತ ತಂಪಾದ ಮುನ್ಸೂಚನೆಯೊಂದನ್ನು ನೀಡಿದೆ. ನಗರದಲ್ಲಿ ಮುಂದಿನ ಇಡೀ ವಾರ ಅಂದರೆ ಮೇ 29 ರವರೆಗೆ ವ್ಯಾಪಕ ಮಳೆಯಾಗುವ (Widespread Rains) ಬಲವಾದ ಸಾಧ್ಯತೆ ಇದ್ದು, ವರುಣನ ಆಗಮನದಿಂದ ತಾಪಮಾನ ಗಣನೀಯವಾಗಿ ಕುಸಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನುಸುಳುಕೋರರಿಗೆ ಕರ್ನಾಟಕವೇ ಸೇಫ್​?

TAGGED:Varuna's roar will be loud in the state for the next 5 days
Share This Article
Facebook Twitter Copy Link Print
Previous Article Ranveer Singh ಡಾನ್ 3 ವಿವಾದ: ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಚಿತ್ರರಂಗದಿಂದ ನಿಷೇಧ! ಯಾಕಿಂಥ ನಿರ್ಧಾರ?
Next Article ಶಾಲಾ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬೀದಿ ನಾಯಿ; ವೈರಲ್ ವಿಡಿಯೋ ನೋಡಿ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?