newsics.com/ನ್ಯೂಸಿಕ್ಸ್
ಬೆಂಗಳೂರು: ವಿಧಾನಪರಿಷತ್ ಏಳು ಸ್ಥಾನಗಳು ತೆರವಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದೆ.
ಬಿಹಾರದ 9 ಹಾಗೂ ಕರ್ನಾಟಕದ 7 ಸ್ಥಾನಗಳಲ್ಲಿ ದ್ವೈವಾರ್ಷಿಕ ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷರ್ ಏಳು ಸದಸ್ಯರ ಅವಧಿ ಜೂನ್ 30ರಂದು ಮುಕ್ತಾಯಗೊಳ್ಳಲಿದೆ. ಬಿಹಾರ ಸದಸ್ಯರ ಅವಧಿ ಜೂನ್ 28 ರಂದು ಮುಕ್ತಾಯಗೊಳ್ಳಲಿದೆ.
ನಾಮಪತ್ರ ಸಲ್ಲಿಸಲು ಜೂನ್ 8 ಕೊನೇ ದಿನ. ಜೂನ್ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 11 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಜೂನ್ 18ರಂದು ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Sleeping with Wet Hair ರಾತ್ರಿ ಒದ್ದೆ ಕೂದಲಿನಲ್ಲಿ ಮಲಗುತ್ತೀರಾ? ಹಾಗಾದ್ರೆ ಈ ಸಮಸ್ಯೆ ಫಿಕ್ಸ್..!