ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
newsics.com/ನ್ಯೂಸಿಕ್ಸ್ ಬೆಳಗಾವಿ: ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಾಂಗ್ ಸೈಡ್ ನಿಂದ ಬಂದ ಆಟೋ ಬೈಕ್ ಗೆ ಗುದ್ದಿದೆ. ಅಪಘಾತದ ಬಳಿಕ ಆಟೋ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಆರು ತಿಂಗಳ ಮಗು, ತಂದೆ, ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ. … Continue reading ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed