Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್?; ಉಗಾಂಡಾದಿಂದ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ
ಕರ್ನಾಟಕಪ್ರಮುಖ

ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್?; ಉಗಾಂಡಾದಿಂದ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನಲ್ಲಿ ಎಬೋಲಾ ವೈರಸ್ ರೋಗದ  ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ.

ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ, ಕಳೆದ ಮೇ 23ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ ಬೂಟಿಕ್’ ಹೋಟೆಲ್‌ನ ರೂಮ್ ನಂಬರ್ 303ರಲ್ಲಿ ತಂಗಿದ್ದರು. ಮಹಿಳೆಗೆ ಎಬೋಲಾ ಮಾದರಿಯ ಆರೋಗ್ಯ ಸಮಸ್ಯೆಗಳು ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ, ತಕ್ಷಣವೇ ಆದೇಶ ಹೊರಡಿಸಿ ಇಂದು ಆಂಬುಲೆನ್ಸ್ ಮೂಲಕ ಅವರನ್ನು ಐಸೋಲೇಷನ್​​ಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪುಣೆ ಲ್ಯಾಬ್ ವರದಿಗಾಗಿ ಕಾಯುತ್ತಿರುವ ಆರೋಗ್ಯ ಇಲಾಖೆ

ಶಂಕಿತ ಮಹಿಳೆಯಿಂದ ಮೇ 25ರಂದೇ ರಕ್ತ ಹಾಗೂ ಇತರ ಅಗತ್ಯ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಸ್ಯಾಂಪಲ್‌ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದಾರೆ. ವರದಿ ಬಂದ ಬಳಿಕವಷ್ಟೇ ಮಹಿಳೆಗೆ ಎಬೋಲಾ ಸೋಂಕು ತಗುಲಿದೆಯೇ ಇಲ್ಲವೇ ಎಂಬುದು ಅಧಿಕೃತವಾಗಿ ದೃಢವಾಗಲಿದೆ.

21 ದಿನ ಕ್ವಾರಂಟೈನ್​

ಎಬೋಲಾ ಸೋಂಕಿತ ರಾಷ್ಟ್ರಗಳಿಂದ ಬಂದವರಿಗೆ ಕ್ವಾರಂಟೈನ್​ನಲ್ಲಿಡಲು ಇತ್ತೀಚೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್​ನಲ್ಲಿಡಲು ಸರ್ಕಾರ ನಿರ್ಧರಿಸಿತ್ತು. ರೋಗಲಕ್ಷಣ ಕಂಡು ಬಂದರೆ ಹತ್ತಿರದ ಆಸ್ಪತ್ರೆಗೆ ವರದಿ ನೀಡಲು ಸೂಚಿಸಲಾಗಿತ್ತು. ಜತೆಗೆ IDSP ಅಡಿಯಲ್ಲಿ ತೀವ್ರ ನಿಗಾ ವ್ಯವಸ್ಥೆ ಮತ್ತು ಅನುಮಾನಾಸ್ಪದ ಪ್ರಕರಣಗಳ ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿತ್ತು.

ವಿಮಾನ ನಿಲ್ದಾಣಗಳು ಮತ್ತು ಪ್ರವೇಶ ಕೇಂದ್ರಗಳ ಸಮನ್ವಯ ವ್ಯವಸ್ಥೆ ಕಲ್ಪಿಸುವುದು, ಪ್ರತ್ಯೇಕ ಕ್ವಾರಂಟೈನ್ ಮತ್ತು ಐಸೋಲೇಷನ್ ಸೌಲಭ್ಯಗಳು ಹಾಗೂ ರೆಫರಲ್ ಆಂಬುಲೆನ್ಸ್ ವ್ಯವಸ್ಥೆಗೂ ಸೂಚಿಸಲಾಗಿದೆ. ಆರೋಗ್ಯ ಸಿಬ್ಬಂದಿಗೆ ತರಬೇತಿ ಹಾಗೂ ಸೋಂಕು ನಿಯಂತ್ರಣ ಕ್ರಮಗಳ ಬಲಪಡಿಸುವಿಕೆಗೆ ಆರೋಗ್ಯ ಇಲಾಖೆ ಸೂಚಿಸಿದೆ.

ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ

TAGGED:Has Ebola reached Bengaluru?; Virus suspected in woman who returned from Uganda
Share This Article
Facebook Twitter Copy Link Print
Previous Article ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ
Next Article ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?