Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ
ಕರ್ನಾಟಕಪ್ರಮುಖ

ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ

Share
2 Min Read
SHARE

newsics.com/ನ್ಯೂಸಿಕ್ಸ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಭಾರೀ ಗುಡುಗು ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು , ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ  ನಮ್ಮ ಮೆಟ್ರೋ   ಸಂಚಾರ ಸ್ಥಗಿತವಾಗಿದೆ.

ಇದರಿಂದ ಮೆಟ್ರೋ ಸ್ಟೇಷನ್​​ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಮೆಟ್ರೋ ನಿಲ್ದಾಣಗಳಲ್ಲೇ ಪರದಾಡುತ್ತಿದ್ದಾರೆ.

ಹಳಿ ಮೇಲೆ ಬಿದ್ದ ಮರದ ಕೊಂಬೆ

ಮರದ ಕೊಂಬೆ ಹಳಿ ಮೇಲೆ ಬಿದ್ದ ಹಿನ್ನೆಲೆ ನೇರಳೆ ಮಾರ್ಗದ ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಇನ್ನು ಸಂಜೆ 6 ಗಂಟೆಯಿಂದ ವೈಟ್‌ಫೀಲ್ಡ್ – ಗರುಡಾಚಾರ ಪಾಳ್ಯ ನಡುವೆ ಮೆಟ್ರೋ ಸೇವೆ ಬಂದ್ ಆಗಿದ್ದು, ಗರುಡಾಚಾರ ಪಾಳ್ಯ – ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ಸಂಚಾರ ಲಭ್ಯವಿದೆ. ಇನ್ನು ಅಡಚಣೆ ತೆರವಿಗೆ ಬಿಎಂಆರ್‌ಸಿಎಲ್ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಶೀಘ್ರದಲ್ಲೇ ಮೆಟ್ರೋ ಸೇವೆ ಪುನರಾರಂಭವಾಗುವ ನಿರೀಕ್ಷೆ ಎಂದು ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂತೆ ವರುಣನ ಆರ್ಭಟ ಆರಂಭವಾಗಿದೆ. ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಟ್ರಾಫಿಕ್ ​ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ನಗರದ ಪ್ರಮುಖ ಕೇಂದ್ರಗಳಾದ ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ.ನಗರ, ವಸಂತನಗರ, ಕೆ.ಆರ್. ಮಾರ್ಕೆಟ್, ಬನಶಂಕರಿ, ಕೋಣನಕುಂಟೆ, ಯಲಹಂಕ ಹಾಗೂ ಹೆಬ್ಬಾಳ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನುಳಿದಂತೆ ಸದಾಶಿವನಗರ, ರಾಜಾಜಿನಗರ, ವಿಜಯನಗರ, ಲಗ್ಗೆರೆ, ಚಂದ್ರಲೇಔಟ್, ಇಂದಿರಾನಗರ, ನಂದಿನಿ ಲೇಔಟ್, ಗಿರಿನಗರ, ಮಹಾಲಕ್ಷ್ಮೀ ಲೇಔಟ್, ಸುಬ್ರಹ್ಮಣ್ಯ ನಗರ, ನಾಗರಭಾವಿ, ಮೂಡಲಪಾಳ್ಯ ಮತ್ತು ಬಸವನಗುಡಿ ಸೇರಿದಂತೆ ನಗರದ ಬಹುತೇಕ ಎಲ್ಲಾ ಕಡೆಗಳಲ್ಲೂ ಎಡಬಿಡದೆ ಮಳೆ ಸುರಿಯುತ್ತಿದೆ.

ಕೆಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.

ಟ್ರಂಪ್​ಗೆ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ

 

TAGGED:Heavy rain with thunder and lightning in BengaluruNamma Metro traffic disrupted
Share This Article
Facebook Twitter Copy Link Print
Previous Article ಟ್ರಂಪ್​ಗೆ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ
Next Article ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್?; ಉಗಾಂಡಾದಿಂದ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?