Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ, ಡಿಕೆಶಿ ಸಿಎಂ ಆಗ್ತಾರೆ : ಶಾಸಕ ಜನಾರ್ದನರೆಡ್ಡಿ ಸ್ಪೋಟಕ ಹೇಳಿಕೆ!
ಕರ್ನಾಟಕಪ್ರಮುಖ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ, ಡಿಕೆಶಿ ಸಿಎಂ ಆಗ್ತಾರೆ : ಶಾಸಕ ಜನಾರ್ದನರೆಡ್ಡಿ ಸ್ಪೋಟಕ ಹೇಳಿಕೆ!

Share
1 Min Read
SHARE

newsics.com/ನ್ಯೂಸಿಕ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರ್ ದೆಹಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.

ಈ ಹೈಕಮಾಂಡ್ ಭೇಟಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ನಾಯಕತ್ವ ಬದಲಾವಣೆಯ ಆಟ ಬಿರುಸುಗೊಂಡಿದೆಯೇ ಎಂಬ ಚರ್ಚೆಗಳು ಮುಂಚೂಣಿಗೆ ಬಂದಿವೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಕೊಪ್ಪಳ ತಾಲೂಕಿನ ಇರಕಲ್‌ಗಡ ಗ್ರಾಮದಲ್ಲಿ ಗಂಗಾವತಿ ಶಾಸಕ ಹಾಗೂ ಬಿಜೆಪಿ ಮುಖಂಡ ಜಿ. ಜನಾರ್ದನ ರೆಡ್ಡಿ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. “ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ರೆಡ್ಡಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, “ಇಂದು ಸಿದ್ದರಾಮಯ್ಯನವರು ಸಿಎಂ ಸ್ಥಾನ ಬಿಟ್ಟುಕೊಡುವಂತಹ ಪರಿಸ್ಥಿತಿ ಎದುರಾಗಿದೆ. ಅದಕ್ಕೆ ಪೂರಕವಾದ ವಾತಾವರಣ ಈಗಾಗಲೇ ನಿರ್ಮಾಣಗೊಂಡಿದ್ದು, ಸಿಎಂ ಸಿದ್ದರಾಮಯ್ಯನವರ ಮೇಲೆ ಹೈಕಮಾಂಡ್‌ನಿಂದ ಸಾಕಷ್ಟು ಒತ್ತಡವಿದೆ. ಸರ್ಕಾರದ ಅಧಿಕಾರಾವಧಿಯ ಎರಡುವರೆ ವರ್ಷಗಳು ಈಗಾಗಲೇ ಮುಗಿದುಹೋಗಿವೆ. ಆದರೂ ಕಳೆದ ಆರು ತಿಂಗಳಿನಿಂದ ಸಿದ್ದರಾಮಯ್ಯನವರು ಸ್ಥಾನ ಬಿಟ್ಟುಕೊಡುತ್ತಿಲ್ಲ” ಎಂದು ಹಾಲಿ ರಾಜಕೀಯ ಸ್ಥಿತಿಗತಿಗಳನ್ನು ವಿಶ್ಲೇಷಿಸಿದರು.

ಮುಂದುವರಿದು ಮಾತನಾಡಿದ ಅವರು, “ನನಗೆ ತಿಳಿದ ಮಟ್ಟಿಗೆ, ಸಿದ್ದರಾಮಯ್ಯನವರಿಂದ ಸಿಎಂ ಸ್ಥಾನವನ್ನು ಬಿಡಿಸುವಂತಹ ವಾತಾವರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ ಎಂದು ಅನಿಸುತ್ತಿದೆ. ಒಂದು ವೇಳೆ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯಾಗಿ ಮುಂದುವರಿದರೆ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ. ಇಲ್ಲದಿದ್ದರೆ ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ದೆಹಲಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಹೈಕಮಾಂಡ್ ಮಟ್ಟದ ಸಭೆಗಳು ನಡೆಯುತ್ತಿರುವಾಗಲೇ, ಪ್ರತಿಪಕ್ಷದ ಶಾಸಕ ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ಹೊರಬಿದ್ದಿರುವುದು ರಾಜ್ಯ ರಾಜಕಾರಣದ ಮುಂದಿನ ದಿಕ್ಸೂಚಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ! ವಿಡಿಯೋ ನೋಡಿ

 

TAGGED:DKSH will become CM: MLA Janardhana Reddy's explosive statement!Siddaramaiah will give up the CM post
Share This Article
Facebook Twitter Copy Link Print
Previous Article Mango ಮಾವಿನ ಹಣ್ಣನ್ನು ತಿನ್ನೋ ಮುನ್ನ ನೀರಿನಲ್ಲಿ ಏಕೆ ನೆನೆಸಬೇಕು?
Next Article ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೋಗಿಗಳು : ತಪ್ಪಿದ ಭಾರಿ ಅನಾಹುತ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?