Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ಸಿಎಂ ದಳಪತಿ ವಿಜಯ್
ಪ್ರಮುಖಮನರಂಜನೆ

ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ಸಿಎಂ ದಳಪತಿ ವಿಜಯ್

Share
1 Min Read
SHARE

newsics.com/ನ್ಯೂಸಿಕ್ಸ್

ಚಿತ್ರರಂಗ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಅರಿತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಮಾಜಿ ನಟ ವಿಜಯ್ ಅವರು, ಚಿತ್ರಮಂದಿರಗಳ ಮಾಲೀಕರು ಮತ್ತು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ.

ರಾಜ್ಯದಲ್ಲಿ ಬಿಡುಗಡೆಯಾಗುವ ಯಾವುದೇ ಹೊಸ ತಮಿಳು ಸಿನಿಮಾಗಳಿಗೆ ಮೊದಲ 7 ದಿನಗಳವರೆಗೆ ದಿನಕ್ಕೆ 5 ಶೋಗಳನ್ನು ನಡೆಸಲು ಅಧಿಕೃತವಾಗಿ ಅನುಮತಿ ನೀಡಿದ್ದಾರೆ. ತಮಿಳುನಾಡು ಸರ್ಕಾರ ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಮೇ 16ರಂದು ತಮಿಳು ಚಿತ್ರರಂಗದ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಚಿತ್ರಮಂದಿರಗಳ ಮಾಲೀಕರ ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತೋಡಿಕೊಂಡಿದ್ದರು. ಚಿತ್ರಮಂದಿರಗಳ ಆದಾಯ ಹೆಚ್ಚಿಸಲು ಮತ್ತು ಚಿತ್ರರಂಗವನ್ನು ನಷ್ಟದಿಂದ ರಕ್ಷಿಸಲು ದಿನಕ್ಕೆ 5 ಪ್ರದರ್ಶನಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು.

ವಿಜಯ್ ಕೂಡ ಸಿನಿಮಾ ಹಿನ್ನೆಲೆಯವರೇ ಆಗಿರುವುದರಿಂದ, ಸಿನಿಮಾ ನಿರ್ಮಾಪಕರು ಹಾಗೂ ಥಿಯೇಟರ್ ಮಾಲೀಕರ ಪ್ರಾಯೋಗಿಕ ಕಷ್ಟಗಳನ್ನು ಚೆನ್ನಾಗಿ ಅರಿತಿದ್ದಾರೆ. ಹೀಗಾಗಿ, ಸಿಎಂ ವಿಜಯ್, ಈ ಬೇಡಿಕೆ ನ್ಯಾಯಯುತವಾಗಿದೆ ಎಂದು ಪರಿಗಣಿಸಿ ತಕ್ಷಣವೇ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಹಳೆಯ ನಿಯಮ ಏನಾಗಿತ್ತು?

1957ರ ತಮಿಳುನಾಡು ಸಿನಿಮಾಸ್ (ರೆಗ್ಯುಲೇಶನ್) ನಿಯಮಾವಳಿಗಳ ಪ್ರಕಾರ, ರಾಜ್ಯದ ಚಿತ್ರಮಂದಿರಗಳಲ್ಲಿ ದಿನಕ್ಕೆ ಕೇವಲ 4 ಪ್ರದರ್ಶನಗಳನ್ನು ನೀಡಲು ಮಾತ್ರ ಅವಕಾಶವಿತ್ತು. ಹಬ್ಬದ ದಿನಗಳಲ್ಲಿ ಅಥವಾ ಸಾರ್ವಜನಿಕ ರಜಾದಿನಗಳಲ್ಲಿ 5ನೇ ವಿಶೇಷ ಪ್ರದರ್ಶನವನ್ನು ಪ್ರದರ್ಶಿಸಲು ಅವಕಾಶವಿತ್ತಾದರೂ, ಅದಕ್ಕಾಗಿ ಚಿತ್ರಮಂದಿರಗಳ ಮಾಲೀಕರು ಅಥವಾ ಚಿತ್ರದ ನಿರ್ಮಾಪಕರು ಆಯಾ ಜಿಲ್ಲಾಧಿಕಾರಿಗಳಿಂದ ಅಥವಾ ಚೆನ್ನೈನಲ್ಲಿ ಸಿಟಿ ಪೊಲೀಸ್ ಕಮಿಷನರ್ ಅವರಿಂದ ಪ್ರತ್ಯೇಕವಾಗಿ ಅನುಮತಿ ಪಡೆಯಬೇಕಾಗಿತ್ತು. ಸರ್ಕಾರ ಕೂಡ ಪ್ರತಿ ಬಾರಿಯೂ ವಿಶೇಷ ಆದೇಶವನ್ನು ಹೊರಡಿಸಬೇಕಾಗಿತ್ತು. ಇದು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿತ್ತಲ್ಲದೆ, ಸಿನಿಮಾಗಳ ಮುಂಗಡ ಬುಕಿಂಗ್ ಪ್ರಕ್ರಿಯೆಗೂ ತಡವಾಗುವಂತೆ ಮಾಡುತ್ತಿತ್ತು.

ಮುಖ್ಯಮಂತ್ರಿ ವಿಜಯ್ ಅವರ ಹೊಸ ಆದೇಶದ ಪ್ರಕಾರ, ಇನ್ಮುಂದೆ ಹೊಸ ಸಿನಿಮಾ ಬಿಡುಗಡೆಯಾದ ಮೊದಲ ವಾರ (7 ದಿನಗಳು) ಐದು ಪ್ರದರ್ಶನಗಳನ್ನು ಯಾವುದೇ ಅನುಮಪತಿ ಪಡೆಯದೆ ನಡೆಸಬಹುದು. ಬೇರೆ ಭಾಷೆಯಿಂದ ಡಬ್ ಆದ ಚಿತ್ರಗಳು, ಮರು-ಬಿಡುಗಡೆಯಾಗುವ ಸಿನಿಮಾಗಳಿಗೂ ಈ ವಿನಾಯಿತಿ ಸಿಗಲಿದೆ.

ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೋಗಿಗಳು : ತಪ್ಪಿದ ಭಾರಿ ಅನಾಹುತ!

TAGGED:Thalapathy Vijay responds to the hardships faced by the film industry
Share This Article
Facebook Twitter Copy Link Print
Previous Article ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೋಗಿಗಳು : ತಪ್ಪಿದ ಭಾರಿ ಅನಾಹುತ!
Next Article ಇಡೀ ರಾಜ್ಯದ ಕಣ್ಣು ದೆಹಲಿಯತ್ತ; ಹೈವೋಲ್ಟೇಜ್ ಸಭೆ ಮಾಡಿದ ಸಿದ್ದರಾಮಯ್ಯ-ರಾಹುಲ್ ಗಾಂಧಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?