Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s Horoscope ಇಂದಿನ ಪಂಚಾಂಗ/ರಾಶಿ ಭವಿಷ್ಯ, 26-05-2026, ಮಂಗಳವಾರ, ಈ ದಿನ ನಿಮಗೆ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

Today’s Horoscope ಇಂದಿನ ಪಂಚಾಂಗ/ರಾಶಿ ಭವಿಷ್ಯ, 26-05-2026, ಮಂಗಳವಾರ, ಈ ದಿನ ನಿಮಗೆ ಹೇಗಿದೆ?

Share
4 Min Read
SHARE

newsics.com/ನ್ಯೂಸಿಕ್ಸ್

ಶುಭ ದಿನ

ಇಂದಿನ ಪಂಚಾಂಗ/ರಾಶಿ ಭವಿಷ್ಯ

26-05-2026, ಮಂಗಳವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಅಧಿಕ ಜ್ಯೇಷ್ಠ ಮಾಸ ಶುಕ್ಲಪಕ್ಷದ ಏಕಾದಶಿ.

—-

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಚಾಂದ್ರಮಾಸ: ಅಧಿಕ ಜ್ಯೇಷ್ಠ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಕೃತ್ತಿಕಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಏಕಾದಶಿ, ನಿತ್ಯನಕ್ಷತ್ರ : ಹಸ್ತಾ, ಯೋಗ : ಹರ್ಷಣ, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:34 – 17:10, ಯಮಗಂಡ ಕಾಲ 09:09 – 10:45, ಗುಳಿಕ ಕಾಲ 12:22 – 13:58

=============

ಇಂದಿನ ರಾಶಿ ಭವಿಷ್ಯ

ಮೇಷ 

ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸ್ನೇಹಿತರ ಸಹಾಯವೂ ದೊರೆಯಲಿದೆ. ದಾಂಪತ್ಯದಲ್ಲಿ ಪರಸ್ಪರ ಮನಸ್ತಾಪವೆದ್ದು ತಣ್ಣಗಾಗಲಿದೆ. ಮಾತಮಾಡುವಿದೇ ಸಾಧನೆಯೆಂದುಕೊಳ್ಳುವುದು ಬೇಡ. ನಾಚಿಕೆಯನ್ನು ಬಿಟ್ಟು ಕೇಳಿದರೆ ನಿಮಗೆ ಬೇಕಾದ ವಸ್ತುಗಳು ಸಿಗಬಹುದು.‌ ಯಾರ ಮೇಲಿರುವ ಬೇಸರವನ್ನು ಮತ್ಯಾರದೋ ಮೇಲೆ ತೋರಿಸಿ ನಿಮ್ಮವರ ದ್ವೇಷಕ್ಕೆ ಕಾರಣವಾಗಬೇಡಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು.

ವೃಷಭ 

ಇಂದು ನಿಮ್ಮ ಮಾತು ಎಲ್ಲರಿಗೂ ಪ್ರಿಯವಾದುದು. ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ನಿಮ್ಮ ಪ್ರತಿಭೆಯ ಅನಾವರಣಕ್ಕೆ ಸಕಾಲವಾಗಿದೆ. ನಿಮ್ಮವರನ್ನು ಬಂಧಿಸಿಡುವ ಕೆಲಸಕ್ಕೆ ಹೋಗಬೇಡಿ. ಪ್ರೀತಿಯಿಂದ ಕೊಟ್ಟ ಉಡುಗೊರೆಯನ್ನು ಸ್ವೀಕರಿಸುವಿರಿ. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾಗುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ.

ಮಿಥುನ 

ಆಪ್ತರು ನಿಮಗೆ ಒದಗುವ ಸಂಕಟದಲ್ಲಿ ಜೊತೆಯಾಗುವರು. ಧೈರ್ಯದಿಂದ ನೀವು ಇರಬಹುದು. ತಂತ್ರಜ್ಞರಿಗೆ ಉತ್ತಮ ಕೆಲಸ ಸಿಗಲಿದೆ ಅಥವಾ ಈಗಾಗಲೇ ಕೆಲಸ ಮಾಡುತ್ತಿದ್ದರೆ ಬಡ್ತಿ ಸಿಗಲಿದೆ. ಹೊಸದಾದ ವಾಹನವನ್ನು ಖರೀದಿ ಮಾಡಲಿದ್ದೀರಿ. ಸಾಲದ ಹೊರೆಯನ್ನು ಕಂಡು ಚಿಂತೆಗೆ ಒಳಗಾಗಬೇಕಾಗಬಹುದು. ಇಂದು ಒಂದೇ ಕೆಲಸದಿಂದ ಎರಡು ಪ್ರಯೋಜನವನ್ನು ಪಡೆಯುವಿರಿ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು.

ಕರ್ಕಾಟಕ 

ಉದ್ಯೋಗದ ಸ್ಥಳದಿಂದ ನಿಮ್ಮನ್ನು ಕೈ ಬಿಡವ ಸಾಧ್ಯತೆ ಇದೆ. ನಿರಾಸೆಯು ಮೂಡಲಿದೆ. ಸರ್ಕಾರದ ಉದ್ಯೋಗ ಗಗನ‌ ಕುಸಿಮದಂತೆ ಆಗಬಹುದು. ವ್ಯಾಪರವು ಅಧೋಗತಿಗೆ ಹೋಗಲಿದೆ. ಶತ್ರುಗಳ ಪಿತೂರಿಯ ಕುರಿತು ನಿಮಗೆ ಶಂಕೆ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಕುರಿತು ಆತಂಕವಿರಬಹುದು. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಆಲಸ್ಯದಿಂದ ನಿಮ್ಮ ಅನೇಕ ಕಾರ್ಯಗಳು ಹಿಂದುಳಿಯಬಹುದು.

ಸಿಂಹ 

ಯಾರದೋ ಅದೃಷ್ಟ ನಿಮಗೆ ದುರದೃಷ್ಟಕರವೆನಿಸಬಹುದು. ಖರ್ಚನ್ನು ನಿಯಂತ್ರಿಸುವುದಕ್ಕಾಗಿ ನಿಮ್ಮ ಅವಶ್ಯಕತೆಗಳನ್ನು ಸದ್ಯ ನಿಲ್ಲಿಸುವಿರಿ. ಕ್ರೀಡೆಯಲ್ಲಿ ಮನಸ್ಸು ಇಡುವಿರಿ. ಓಡಾಟದ ಸುಸ್ತು ನಿಮಗೆ ಅನಾರೋಗ್ಯವಾಗಲಿದೆ. ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ನಿಮ್ಮ ಮನಸ್ಸಿಗೆ ಹಿತವಾದುದನ್ನು ಮಾತ್ರ ಮಾಡುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ.

ಕನ್ಯಾ 

ಇಂದಿನ ಅತಿಯಾದ ಸಂತೋಷ ದುಃಖಕ್ಕೂ ಕಾರಣವಾಗಬಹುದು. ಯಂತ್ರೋಪಕರಣದ ಮಾರಾಟಗಾರಿಗೆ ಲಾಭವು ಆಗುವುದು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ಕೀರ್ತಿಯನ್ನು ಗಳಿಸುವರು. ನಿಮಗೆ ಅಪಮಾನವಾಗುವ ಕೆಲಸವು ನಡೆಯಬಹುದು. ಸ್ತ್ರೀಸಂಬಂಧವಾದ ಅಪವಾದಗಳು ಬರಬಹುದು. ಮಾನಸಿಕ ಕಿರುಕುಳವನ್ನು ಅನ್ಯರಿಂದ ಅನುಭವಿಸುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು.

ತುಲಾ 

ಇಂದು ಇಷ್ಟು ದಿನ ನಂಬಿ ಬಂದಿದ್ದ ಆಸ್ತಿಯು ಕೈ ತಪ್ಪುವ ಸಾಧ್ಯತೆ ಇದೆ. ಸಹನೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಿಮಗೆ ಎಚ್ಚರಿಕೆ ಇರಲಿ. ಸರ್ಕಾರಿ ಕಾರ್ಯಗಳು ಹಿಂದೆ ಬೀಳಲಿವೆ. ಅನಿವಾರ್ಯವಾಗಿ ಮಾಡಿದ ಸಣ್ಣ ಸಾಲವು ಇಂದು ದೊಡ್ಡದಾಗಿದೆ. ಇನ್ನೂ ಸಾಲಕ್ಕೆಂದು ಇನ್ನೊಬ್ಬರ ಬಳಿ ಕೈ ಚಾಚ ಬೇಕಾಗಬಹುದು.‌ ಮನೋಬಲವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಇಟ್ಟುಕೊಳ್ಳಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ಹವ್ಯಾಸಗಳು ನಿಮಗೆ ಪ್ರಯೋಜನವನ್ನು ಕೊಡುತ್ತದೆ.

ವೃಶ್ಚಿಕ 

ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಿ. ಈಗಿರುವ ಕೆಲಸವನ್ನು ಬಿಟ್ಟು ಸ್ವಂತ ಉದ್ಯೋಗಕ್ಕೆ ತೊಡಗಬಹುದು. ಸಂತೋಷವಾಗಿರಲು ಬೇಕಾದಂತೆ ನಿಮ್ಮ ಶ್ರಮವನ್ನು ಇಟ್ಟುಕೊಳ್ಳಿ.‌ ಬಂಧುಗಳ ಭೇಟಿ ಸ್ವಲ್ಪ ಕಿರಿಕಿರಿ ಎನಿಸಿದರೂ ಅನಿವಾರ್ಯವಾಗಿ ಸುಮ್ಮನಿರುವಿರಿ. ಮನಸ್ಸಿಗೆ ಬುದ್ಧಿಗೆ ಕೆಲಸವನ್ನು ಕೊಡಬೇಡಿ. ಧನಾಗಮನದ ವಾರ್ತೆಯು ಇರಲಿದೆ. ಮರಗೆಲಸದವರಿಗೆ ಉತ್ತಮ ಕೆಲಸಗಳು ಸಿಗಲಿವೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ.

ಧನುಸ್ಸು

ಇಂದು ನೀವು ಮಾಡಲೇಬೇಕಾದ ಕೆಲಸವನ್ನು ಮಾಡದೇ ಆಲಸ್ಯದಿಂದ ಕಳೆಯುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಅಕ್ಕಪಕ್ಕದವರ ಜೊತೆ ಅಸಮಾಧಾನ ವ್ಯಕ್ತವಾಗುವುದು. ಪ್ರಾಣಿಗಳ ಜೊತೆ ಸಮಯವನ್ನು ಕಳೆಯುವ ಮನಸ್ಸು ಮಾಡುವಿರಿ. ಊರಿನ ಉತ್ಸವದಲ್ಲಿ ಭಾಗಿಯಾಗುವಿರಿ. ರಾಜಕೀಯ ವ್ಯಕ್ತಿಗಳಾಗಿದ್ದರೆ ಇಂದು ಜನಸೇವೆಯನ್ನು ಮಾಡುವಿರಿ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು.

ಮಕರ 

ಇಂದು ಕುಟುಂಬದವರ ಮಾತಿನ ಅಲಕ್ಷ್ಯದಿಂದ ತೊಂದರೆಯಾದಂತೆ ಅನ್ನಿಸುವುದು. ಹಿರಿಯರಿಗೆ ತೊಂದರೆಯನ್ನು ಕೊಡಲು ಹೋಗಬೇಡಿ. ಯಶಸ್ಸು ನಿಮಗೆ ಬೇಡವೆಂದೆನಿಸಬಹುದು. ಯಾರ ಜೊತೆಗೂ ಇರಲು ನೀವು ಇಷ್ಟಪಡುವುದಿಲ್ಲ. ನಿದ್ರೆಯಲ್ಲಿ‌ ಬಿದ್ದ ದುಶಸ್ವಪ್ನವು ನಿಮ್ಮನ್ನು ಚಿಂತೆಗೆ ತಳ್ಳುವುದು. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು.

ಕುಂಭ

ಇಂದು ನಿಮ್ಮ ಅಧಿಕವಾದ ಮಾತು ಕೇಳುವವರಿಗೆ ಹಿಂಸೆ ಕೊಡುವುದು. ಆಪ್ತರ ಜೊತೆ ಮಾತುಕತೆಗಳು ಆಗಬಹುದು. ಮನಸ್ಸಿಗೆ ಹಿತವಾದ ಕೆಲಸವನ್ನು ಮಾಡಿ. ಇಲ್ಲವಾದರೆ ಕೊರಗಬೇಕಾದೀತು. ಉತ್ತಮ ಆಹಾರವನ್ನು ಸೇವಸಲಿದ್ದೀರಿ. ಅಹಿತಕರವಾದ ಘಟನೆಯು ನಿಮ್ಮನ್ನು ಸ್ತಬ್ಧಗೊಳಿಸಬಹುದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಚರಾಸ್ತಿಯನ್ನು ಮಾರಾಟ ಮಾಡಿ ಹಣ ಸಿಗುವುದು.

ಮೀನ 

ಕಡಿಮೆ ವೆಚ್ಚದಲ್ಲಿ ಹೆಚ್ಚು ಸಂಪಾದಿಸುವ ಯೋಜನೆಯನ್ನು ಹಾಕಿಕೊಳ್ಳುವುದಕ್ಕೆ ಎಲ್ಲಿಂದಲಾದರೂ ನಿಮಗೆ ಐಡಿಯಾ ಸಿಗಬಹುದು. ತಂದೆಯ ಜತೆ ವಿವಾದ ಮಾಡಿಕೊಳ್ಳುವಿರಿ. ಹಿರಿಯರ ಹಾರೈಕೆ ನಿಮಗೆ ಸಿಗಲಿದೆ. ಕಛೇರಿಯ ಕೆಲಸಕ್ಕೂ ಸಮಯ ಸಿಗದೇ ಒತ್ತಡದಲ್ಲಿ ಇರುವಿರಿ. ಕಲಹವಾಗಿ ಸಂಗಾತಿಯಿಂದ ದೂರವಿರಬೇಕಾದೀತು. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಸಾವಾಗಲಿದೆ. ಪ್ರೀತಿಪಾತ್ರರಿಗೆ ಸಮಯ ವ್ಯರ್ಥ ಮಾಡುವಿರಿ. ಪ್ರೇಮವು ಯಾರಿಂದಲೋ ಬಹಿರಂಗವಾಗುವುದು.

ಅಗ್ಗದ ಸನ್ ಗ್ಲಾಸ್ ಕಣ್ಣಿಗೆ ಹಾನಿ ಮಾಡಬಹುದು ಎಚ್ಚರ

 

ವೈಬ್ರೆಂಟ್‌ ಕಲರ್‌ಗೆ ತಿರುಗಿದ ಸ್ಟ್ರೈಪ್ಡ್ ಡ್ರೆಸ್‌ ಫ್ಯಾಷನ್‌

TAGGED:#almanac #zodiac #prediction #26-05-2026 #tuesday #horoscope #planetary #positions #news #newsics
Share This Article
Facebook Twitter Copy Link Print
Previous Article ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
Next Article Bigg Boss Kavya Shaiva ಬಿಗ್ ಬಾಸ್ ಸ್ಪರ್ಧಿ ಕಾವ್ಯಾ ಶೈವಗೆ ವೇದಿಕೆಯಲ್ಲೇ ಭಾರೀ ಅವಮಾನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?