newsics.com/ನ್ಯೂಸಿಕ್ಸ್
ಕಾಂತಾರ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.
ರಣವೀರ್ ಸಿಂಗ್ ದೇವಿಯ ಸನ್ನಿಧಿಯಲ್ಲಿ ಕುಳಿತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಹಿಂದೆ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ರಿಷಬ್ ಶೆಟ್ಟಿಯ ಎದುರು ಅವರನ್ನು ಹೊಗಳುವ ಭರದಲ್ಲಿ ಕಾಂತಾರ ಸಿನಿಮಾದಲ್ಲಿ ಅವರು ಚಾಮುಂಡಿ ದೈವದ ನಟನೆ ಮಾಡಿದ್ದನ್ನು ಅನುಕರಣೆ ಮಾಡಲು ಹೊರಟಿ ಅಭಾಸ ಮಾಡಿಕೊಂಡಿದ್ದಾರೆ.
ಜೊತೆಗೆ ದೈವವನ್ನು ದೆವ್ವ ಎಂದು ಹೇಳಿದ್ದರು. ಇದರಿಂದಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರು ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದರು. ಹೈಕೋರ್ಟ್ ನಲ್ಲಿ ವಿಚಾರಣೆ ವೇಳೆ ಚಾಮುಂಡಿ ದೇವಿಯ ಸನ್ನಿಧಿಗೆ ಬಂದು ಕ್ಷಮೆ ಕೇಳಲು ಸಿದ್ಧ ಎಂದಿದ್ದರು. ಅದಕ್ಕೆ ತಕ್ಕಂತೆ ಈಗ ಮಾಡಿ ಮಾತು ಉಳಿಸಿಕೊಂಡಿದ್ದಾರೆ.
Siddaramaiah ಯತೀಂದ್ರಗೆ DCM ಸ್ಥಾನ, ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್?