Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್

Share
2 Min Read
SHARE

newsics.com/ನ್ಯೂಸಿಕ್ಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್​​ ಪ್ಲ್ಯಾನ್​​ ರೂಪಿಸಿರುವ ಮಾಹಿತಿ ಸಿಕ್ಕಿದೆ.

ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್​​ನಲ್ಲಿ ಚರ್ಚೆ ನಡೆದಿದೆ. ಜಾತಿ ಸಮೀಕರಣ ಆಧರಿಸಿ ನಾಲ್ವರಿಗೆ ಪ್ರಾತಿನಿಧ್ಯ ನೀಡುವ ಮಾತುಗಳು ಕೇಳಿಬಂದಿವೆ. ಒಬಿಸಿ, ದಲಿತ, ಮುಸ್ಲಿಂ ಅಥವಾ ಅಲ್ಪಸಂಖ್ಯಾತ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ನಾಲ್ವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ವರಿಷ್ಠರು ಒಲವು ತೋರಿದ್ದಾರಂತೆ.

ದಲಿತ ಕೋಟಾದಲ್ಲಿ ಹಾಲಿ ಗೃಹ ಸಚಿವರಾಗಿರುವ ಪರಮೇಶ್ವರ್ ಅಥವಾ ಸಚಿವ ಪ್ರಿಯಾಂಕ್​​ ಖರ್ಗೆ ಡಿಸಿಎಂ ಆಗುವ ಸಾಧ್ಯತೆ ಇದ್ದರೆ, ಒಬಿಸಿ ಕೋಟಾದಲ್ಲಿ ಯತೀಂದ್ರಗೆ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗಿದೆ. ಇನ್ನು ಮುಸ್ಲಿಂ ಕೋಟಾದಲ್ಲಿ ಹಾಲಿ ಸಚಿವ ಜಮೀರ್ ಅಥವಾ ಸದ್ಯ ವಿಧಾನ ಸಭೆ ಸ್ಪೀಕರ್​​ ಆಗಿರುವ ಯು.ಟಿ. ಖಾದರ್​ಗೆ ಹೈಕಮಾಂಡ್​​ ಮಣೆ ಹಾಕುವ ಸಾಧ್ಯತೆ ಇದೆ. ಲಿಂಗಾಯತ ಕೋಟಾದಲ್ಲಿ ಈಶ್ವರ್ ಖಂಡ್ರೆ ಮತ್ತು ಎಂ.ಬಿ.ಪಾಟೀಲ್ ರೇಸ್​​ನಲ್ಲಿದ್ದರೆ, ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ.ಜಾರ್ಜ್​ಗೆ ಡಿಸಿಎಂ ಸ್ಥಾನ ಸಿಗುವ ಬಗ್ಗೆ ಅಂದಾಜಿಸಲಾಗಿದೆ.

ನೂತನ ಸಿಎಂ ಬೆನ್ನಲ್ಲೇ ಕೆಪಿಸಿಸಿಗೂ ಹೊಸ ಸಾರಥಿ
ಇನ್ನು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅವರ ಆಯ್ಕೆ ಬಹುತೇಕ ಖಚಿತವಾಗಿರುವ ಹಿನ್ನೆಲೆ ಕೆಪಿಸಿಸಿಗೂ ಹೊಸ ಸಾರಥಿಯ ನೇಮಕವಾಗಲಿದೆ. ಸಿಎಂ ಘೋಷಣೆಯ ಜೊತೆ ಜೊತೆಗೆ ಕೆಪಿಸಿಸಿಗೂ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಘೋಷಿಸಲಿದ್ದು, ಸಿಎಂ ಮತ್ತು ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬುದು ನಿರ್ಧಾರವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಸಚಿವ ಸತೀಶ್​​ ಜಾರಕಿಹೊಳಿ ಕಣ್ಣಿಟ್ಟಿದ್ದು, ಈ ಸಂಬಂಧ ಕೆಲ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

TAGGED:Congress high command plans major surgery in the state
Share This Article
Facebook Twitter Copy Link Print
Previous Article ಬ್ರೇಕಪ್ ಬಗ್ಗೆ ಹೇಳಿ ಕಣ್ಣೀರಿಟ್ಟ ನಟಿ ಕೃಷಿ ತಾಪಂಡ!
Next Article Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?