newsics.com/ನ್ಯೂಸಿಕ್ಸ್
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ, ಡಿ.ಕೆ ಶಿವಕುಮಾರ್ ಸಿಎಂ ಪಟ್ಟಕ್ಕೇರಲು ಸಜ್ಜಾಗಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಘೋಷಿಸಿದ ಬೆನ್ನಲ್ಲೇ ಡಿಕೆಶಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್ನಲ್ಲಿ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಬಗ್ಗೆ ಘೋಷಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಮುಂದಿನ ಕಾರ್ಯಕ್ರಮಗಳಿಗೆ ಸಜ್ಜಾಗಿದ್ದಾರೆ.
ಅವರು ತಮ್ಮ ರಾಜಕೀಯ ಗುರು ಎಂದೇ ಪರಿಗಣಿಸುವ ಅಜ್ಜಯ್ಯರನ್ನು ಭೇಟಿ ಮಾಡಿ, ಮುಂದಿನ ರಾಜಕೀಯ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಲು ಸಮಯ ಕೇಳಿದ್ದಾರೆ. ವಿಶೇಷವಾಗಿ, ತಮ್ಮ ಪದಗ್ರಹಣ ಸಮಾರಂಭದ ಸಮಯ, ದಿನಾಂಕ ಹಾಗೂ ಇತರೆ ಕಾರ್ಯಕ್ರಮಗಳ ಬಗ್ಗೆ ಶುಭ ಮುಹೂರ್ತದಲ್ಲಿ ನಿರ್ಧಾರ ಕೈಗೊಳ್ಳಲು ಅವರು ಚಿಂತನೆ ನಡೆಸುತ್ತಿದ್ದಾರೆ.
ಡಿಕೆಶಿ ಪದಗ್ರಹಣಕ್ಕೆ ಶುಭ ಸಮಯ ನಿಗದಿ ಮಾಡಿಕೊಳ್ಳಲು ಆಸಕ್ತಿ ತೋರಿದ್ದು, ಗವರ್ನರ್ ಭೇಟಿ, ಶಾಸಕಾಂಗ ಪಕ್ಷದ ಸಭೆ, ಹಾಗೂ ಸರ್ಕಾರದ ಮುಂದಿನ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಮುಖ ಕಾರ್ಯಕ್ರಮಗಳನ್ನೂ ಕೂಡ ಶುಭ ಘಳಿಗೆಯಲ್ಲೇ ನಡೆಸುವ ಯೋಚನೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಜ್ಜಯ್ಯರನ್ನು ಭೇಟಿಯಾಗಿ ಅವರ ಸಲಹೆ, ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲು ಮುಂದಾಗಿದ್ದಾರೆ.
Supreme Court ಬೆಟ್ಟಿಂಗ್, ಗ್ಯಾಂಬ್ಲಿಂಗ್ ಆಡುವುದು ಮೂಲಭೂತ ಹಕ್ಕಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು