newsics.com/ನ್ಯೂಸಿಕ್ಸ್
ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ದೆಹಲಿಯಲ್ಲಿ ನಡೆದ ಹೈಕಮಾಂಡ್ ಜೊತೆಗಿನ ಮಹತ್ವದ ಸಭೆಯ ನಂತರ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ.
ಬುಧವಾರ ಬೆಳಗ್ಗೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಾವಾಗಿಯೇ ರಾಜೀನಾಮೆ ನೀಡುವ ಪ್ರಸ್ತಾಪ ಮುಂದಿಟ್ಟಿದ್ದಾರೆ
ಕಾಂಗ್ರೆಸ್ ವರಿಷ್ಠರ ಭೇಟಿಯ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಹೈಕಮಾಂಡ್‌ಗೆ ತಿಳಿಸಿದ್ದಾರೆ.
ರಾಜೀನಾಮೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಆ ಬಳಿಕ ಸಿಎಂ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಚಿವರಿಗೆ ತಿಳಿಸಿದರು. ಸಿಎಂ ಅವರ ಈ ದಿಢೀರ್ ನಿರ್ಧಾರದಿಂದ ಸಭೆಯಲ್ಲಿದ್ದ ಹಲವು ಸಚಿವರು ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಮಧ್ಯಾಹ್ನವೇ ಮುಂದಿನ ಕಾನೂನು ಹಾಗೂ ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಲಿರುವ ಅವರು ತಮ್ಮ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಲಿದ್ದಾರೆ ಎಂದು ಸಭೆಯ ಮೂಲಗಳು ಖಚಿತಪಡಿಸಿವೆ.
ಈ ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಇಷ್ಟು ದಿನಗಳ ಕಾಲ ಸರ್ಕಾರ ಮುನ್ನಡೆಸಲು ಮತ್ತು ಜನಪದ ಕಾರ್ಯಕ್ರಮಗಳನ್ನು ಜಾರಿಗೆ ತರಲು ತಮಗೆ ಬೆಂಬಲವಾಗಿ ನಿಂತ ಎಲ್ಲಾ ಸಚಿವರಿಗೂ ಹಾಗೂ ಶಾಸಕರಿಗೂ ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಿದರು. ಮುಂಬರುವ ದಿನಗಳಲ್ಲಿ ಪಕ್ಷ ಮತ್ತು ನಾಯಕತ್ವ ವಹಿಸಲಿರುವ ಮುಂದಿನ ಹೆಜ್ಜೆಗಳ ಕುರಿತು ಸಭೆಯಲ್ಲಿ ಕೆಲವು ಪ್ರಾಥಮಿಕ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರ ಈ ರಾಜೀನಾಮೆ ಘೋಷಣೆಯ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳು ಸಖತ್ ಗಿಜಿಗುಡುತ್ತಿವೆ. ಮುಂದಿನ ಮುಖ್ಯಮಂತ್ರಿ ಯಾರು? ಹೈಕಮಾಂಡ್‌ನ ಮುಂದಿನ ನಡೆ ಏನು? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಎದ್ದಿದ್ದು, ರಾಜಭವನದ ಸುತ್ತಮುತ್ತ ಹಾಗೂ ಪ್ರಮುಖ ನಾಯಕರ ನಿವಾಸಗಳ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ರಾಜಭವನದ ಭೇಟಿಯ ಕಡೆಗೆ ಈಗ ಇಡೀ ರಾಜ್ಯದ ಕಣ್ಣು ನೆಟ್ಟಿದೆ.
DK Shivakumar – Siddaramaiah ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಕಾಲಿಗೆ ಬಿದ್ದ ಡಿಸಿಎಂ ಡಿಕೆ ಶಿವಕುಮಾರ್!
ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬಹುದಾ?