newsics.com/ನ್ಯೂಸಿಕ್ಸ್
ಬೆಂಗಳೂರು: ಇಂದು ರಾಜ್ಯಪಾಲರ ಕಾರ್ಯದರ್ಶಿಯನ್ನು ಭೇಟಿಯಾಗಿರುವಂತ ಸಿದ್ಧರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಆ ಮೂಲಕ ದಾಖಲೆಯ 2,902 ದಿನಗಳ ಆಡಳಿತ ಅಂತ್ಯಗೊಂಡಂತೆ ಆಗಿದೆ.
ಇದರ ಬೆನ್ನಲ್ಲೇ ಸಿಎಂ ಸಿದ್ದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರು ದಿಢೀರ್ ದೆಹಲಿ ವಿಮಾನ ಏರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ರಾಜ್ಯ ರಾಜಕೀಯದ ಮುಂದಿನ ನಡೆಗಳ ಕುರಿತು ತೀವ್ರ ಕುತೂಹಲ ಮೂಡಿಸಿದೆ.
ಪ್ರಸ್ತುತ ಕಾಂಗ್ರೆಸ್ ವಲಯದಲ್ಲಿ ಶಾಸಕಾಂಗ ಪಕ್ಷದ ಸಭೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ಅಧಿಕೃತವಾಗಿ ನಿಗದಿಯಾಗಿಲ್ಲ. ಹೈಕಮಾಂಡ್ ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ದೇಶನವನ್ನು ನೀಡಿಲ್ಲ.
ಮದದಲ್ಲಿ ತೇಲಾಡುತ್ತಿರುವ ಈ ಜೋಡಿಗೆ ಅನಿರೀಕ್ಷಿತ ತಿರುವು : ವೈರಲ್ ವಿಡಿಯೋ ನೋಡಿ