newsics.com/ನ್ಯೂಸಿಕ್ಸ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದ ವಿಮಾನ ಮಾರ್ಗ ಬದಲಾಯಿಸಿದ್ದು, ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್ ಆಗಿದೆ.
ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಜೈಪುರದಲ್ಲಿ ವಿಮಾನ ಲ್ಯಾಂಡಿಂಗ್ ಆಗಿದೆ. ದೆಹಲಿ ಭಾಗದಲ್ಲಿ ಮಳೆಯಾಗುತ್ತಿರುವ ಕಾರಣ ಜೈಪುರದಲ್ಲಿ ಇಳಿದಿದೆ.
ಸಿದ್ಧರಾಮಯ್ಯ ಅವರೊಂದಿಗೆ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಶಾಸಕ ಪೊನ್ನಣ್ಣ ಕೂಡ ಪ್ರಯಾಣಿಸುತ್ತಿದ್ದರು. ಹವಾಮಾನ ಪರಿಸ್ಥಿತಿ ತಿಳಿಯಾದ ಬಳಿಕ ವಿಮಾನದಲ್ಲಿ ಜೈಪುರದಿಂದ ದೆಹಲಿಗೆ ಸಿದ್ಧರಾಮಯ್ಯ ತೆರಳಲಿದ್ದಾರೆ ಎನ್ನಲಾಗಿದೆ.