ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
newsics.com/ನ್ಯೂಸಿಕ್ಸ್ ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ಪ್ರಮೋದ್, ರುದ್ರೇಶ್, ಸೋಮು, ಮಲ್ಲಿಕಾರ್ಜುನ ಮೃತಪಟ್ಟವರು ಎಂದು ಹೇಳಲಾಗಿದೆ. ಮೊಳಕಾಲ್ಮೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ ಬೆನ್ನಲ್ಲೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ
Copy and paste this URL into your WordPress site to embed
Copy and paste this code into your site to embed