ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

newsics.com/ನ್ಯೂಸಿಕ್ಸ್ ಬೆಂಗಳೂರು: ಧಾರಾಕಾರ ಮಳೆಗೆ ಮತ್ತೊಂದು ಕಾಂಪೌಂಡ್ ಕುಸಿದು ಆಟೋ ಚಾಲಕರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ  ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂಜೆ ವೇಳೆ ಸುರಿಧ ಭಾರಿ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಈ ಅನಾಹುತ ಸಂಭವಿಸಿದೆ. ಬೋರಯ್ಯ ಮೃತ ಆಟೋ ಚಾಲಕ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್ : ಈ ಮಾರ್ಗಸೂಚಿ … Continue reading ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು