Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ
ಕರ್ನಾಟಕಪ್ರಮುಖ

ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ವೃದ್ಧೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ಅಸ್ವಸ್ಥರನ್ನಾಗಿಸಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ.

ಬೆಂಗಳೂರಿನ ಜೆಪಿ ನಗರ ನಿವಾಸಿ ಪ್ರೇಮಾ(70) ಚಿನ್ನಾಭರಣ ಕಳೆದುಕೊಂಡವರು. ಮೇ 23ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಅವರು ಮೇ 25 ರಂದು ಮಧ್ಯಾಹ್ನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯಕ್ಕೆ ಆಗಮಿಸಿದ್ದಾರೆ.

ದೇವರ ದರ್ಶನ ಮುಗಿಸಿ ರಾತ್ರಿ 9.45 ರ ಸುಮಾರಿಗೆ ವಾಪಸ್ ಊರಿಗೆ ಹೋಗಲು ಮುಖ್ಯದ್ವಾರದ ಮುಂಭಾಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಕುಳಿತುಕೊಂಡಿದ್ದಾರೆ. ಅವರ ಪಕ್ಕದಲ್ಲಿಯೇ ಕುಳಿತಿದ್ದ ಅಪರಿಚಿತ ವ್ಯಕ್ತಿ ಮಾತನಾಡಿಸಿ ತಾನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಬಂದಿದ್ದೇನೆ ಎಂದು ಹೇಳಿ ಲಡ್ಡು ಪ್ರಸಾದ ಕೊಟ್ಟು ನಂತರ ಜ್ಯೂಸ್ ಬಾಟಲಿಯಿಂದ ಜ್ಯೂಸ್ ಕುಡಿಯುವಂತೆ ಒತ್ತಾಯಿಸಿದ್ದಾನೆ. ಪ್ರೇಮಾ ಅವರು ಸಲ್ಪ ಜ್ಯೂಸ್ ಕುಡಿದು ವಾಪಸ್ ಕೊಟ್ಟಿದ್ದು ನಂತರ ಅಸ್ವಸ್ಥರಾಗಿದ್ದಾರೆ.

ದೇವಾಲಯದ ಮಹಾದ್ವಾರದ ಬಳಿ ಇರುವ ಕಟ್ಟೆಯ ಬಳಿಗೆ ಅವರನ್ನು ಕರೆದುಕೊಂಡು ಹೋಗಿ ಅಪರಿಚಿತ ಕೂರಿಸಿದ್ದಾನೆ. ಉಪಾಯವಾಗಿ ಅವರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ದೋಚಿ ಬಸ್ ನಲ್ಲಿ ಸೀಟು ಇದೆಯಾ ಎಂದು ನೋಡಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ. ಅಸ್ವಸ್ಥಗೊಂಡಿದ್ದ ಪ್ರೇಮಾ ಅವರನ್ನು ಗಮನಿಸಿದವರು ಉಜಿರೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರೇಮಾ ಅವರ ಕೊರಳಲ್ಲಿದ್ದ ಚಿನ್ನದ ಸರ, ಪರ್ಸ್ ನಲ್ಲಿದ್ದ ಬಳೆ, ಚಿನ್ನದ ಸರ, 7 ಸಾವಿರ ರೂ. ನಗದು ಸೇರಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ದೋಚಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

TAGGED:an elderly man was offered juice and gold ornaments worth Rs. 10 lakh were stolen and he fled.In Dharmasthala
Share This Article
Facebook Twitter Copy Link Print
Previous Article actress Kajal Aggarwal ನಟಿ ಕಾಜಲ್ ಅಗರ್ವಾಲ್ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಫುಲ್ ಸುಸ್ತು
Next Article Rain Alert ರಾಜ್ಯದಲ್ಲಿ ಗುಡುಗು ಬಿರುಗಾಳಿ ಸಹಿತ ಮಳೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?