newsics.com/ನ್ಯೂಸಿಕ್ಸ್
ನವದೆಹಲಿ: ಸಿದ್ದರಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ರಾಜೀನಾಮೆ ಬಳಿಕ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರಿಗೂ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ಈ ವೇಳೆ ಕೆಲ ಕಾಲ ಮೂವರು ನಾಯಕರು ಸಮಾಲೋಚನೆ ನಡೆಸಿದರು.
ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕೆಲ ಹೊತ್ತಲ್ಲೇ ಡಿ.ಕೆ.ಶಿವಕುಮಾರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಸಿಎಂ ಹೆಸರಿ ಅಧಿಕೃತವಾಗಿ ಘೋಷಣೆಯಾಗಲಿದೆ.
Venkataramanappa passes away ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ